ಮಂಗಳೂರು, ಅಕ್ಟೋಬರ್ 19, 2026 (ಕರಾವಳಿ ಟೈಮ್ಸ್) : ಕರಾವಳಿ ಕರ್ನಾಟಕದ ಮಹಾ ಉತ್ಸವವಾಗಿ ರೂಪುಗೊಂಡಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಅಕ್ಟೋಬರ್ 20 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಸಂಜೆ 3.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನಕ್ಕೆ ಆಗಮಿಸುವ ಬಿ.ಕೆ. ಹರಿಪ್ರಸಾದ್ ಅವರು 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದಲ್ಲಿ ನಡೆಯುವ ಮಂಗಳೂರು ಶಾರದಾ ಮಹೋತ್ಸವಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿರುವರು. ರಾತ್ರಿ 8 ಗಂಟೆಗೆ ಅವರು ಬೆಂಗಳೂರಿಗೆ ನಿರ್ಗಮಿಸುವರು ಎಂದು ಕೆಪಿಸಿಸಿ ಕಚೇರಿ ಪ್ರಕಟಣೆ ತಿಳಿಸಿದೆ.














0 comments:
Post a Comment