ಮಂಗಳೂರು, ಅಕ್ಟೋಬರ್ 01, 2026 (ಕರಾವಳಿ ಟೈಮ್ಸ್) : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನ ಕದ್ರಿ ಗ್ರೌಂಡಿನಿಂದ ಸಿಟಿ ಹಾಸ್ಪಿಟಲ್, ಕದ್ರಿ ಕೈಬಟ್ಟಲ್ ಕೋರಲ್ ಅಪಾರ್ಟ್ ಮೆಂಟ್ ಬಳಿ 50 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಪ್ರತೀ ಮಳೆಗಾಲದಲ್ಲಿ ಕದ್ರಿ ಮೈದಾನದಿಂದ ಸಿಟಿ ಆಸ್ಪತ್ರೆವರೆಗೆ ಮಣ್ಣು ಮಿಶ್ರಿತ ನೀರು ಹರಿದು ಬಂದು ಇಲ್ಲಿನ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳೀಯ ನಿಕಟಪೂರ್ವ ಪಾಲಿಕೆ ಸದಸ್ಯ ಕದ್ರಿ ಮನೋಹರ್ ಶೆಟ್ಟಿಯವರು ವಿಶೇಷ ಪ್ರಯತ್ನ ಪಟ್ಟಿದ್ದಾರೆ. ಕಳೆದ ಮೂರೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರದಿಂದ ಯಾವುದೇ ವಿಶೇಷ ಅನುದಾನಗಳು ಬಂದಿಲ್ಲವಾದರೂ ಲಭ್ಯ ಅಲ್ಪ ಅನುದಾನದಲ್ಲೇ ನಿಮ್ಮೆಲ್ಲರ ಬೇಡಿಕೆಯಂತೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈ ಸಂದರ್ಭ ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು, ಪರಿಸರದ ನಿವಾಸಿಗಳು ಉಪಸ್ಥಿತರಿದ್ದರು.













0 comments:
Post a Comment