ಮಂಗಳೂರು, ಅಕ್ಟೋಬರ್ 30, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಕದ್ರಿ ಮಂಜುನಾಥ ದೇವಸ್ಥಾನದ ಬಳಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಸಾರ್ವಜನಿಕರ ಅನುಕೂಲತೆ ಹಾಗೂ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರಾಹುಲ್ ರತ್ನಂ ಪಾಂಡೆ, ಮುಡಾ ಆಯುಕ್ತ ಮುಹಮ್ಮದ್ ನಝೀರ್ ಸಹಿತ ಮಹಾನಗರ ಪಾಲಿಕೆ ಹಾಗೂ ಮುಡಾದ ಅಧಿಕಾರಿಗಳು ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ದಿಲ್ ರಾಜ್ ಆಳ್ವ, ರಾಜೇಂದ್ರ ಚಿಲಿಂಬಿ, ಉಷಾ ಪ್ರಭಾಕರ್, ಕಿರಣ್ ಕುಮಾರ್, ಪ್ರೀತಾ ನಂದನ್ ಉಪಸ್ಥಿತರಿದ್ದರು.












0 comments:
Post a Comment