ಮಂಗಳೂರು, ಅಕ್ಟೋಬರ್ 13, 2026 (ಕರಾವಳಿ ಟೈಮ್ಸ್) : ಮಂಗಳೂರು ಮಹಾನಗರಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಬಾಕಿ ಉಳಿದ ಜನನ-ಮರಣ ಪ್ರಮಾಣ ಪತ್ರಗಳನ್ನು ವಿತರಿಸಲು ಅಕ್ಟೋಬರ್ 14 ರಿಂದ 17 ರವರೆಗೆ ಆಂದೋಲನವನ್ನು ಬೆಳಿಗ್ಗೆ 10.30 ರಿಂದ ಸಂಜೆ 6 ಗಂಟೆಯವರೆಗೆ ಮಹಾನಗರಪಾಲಿಕೆಯ 2ನೇ ಮಹಡಿಯ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ವೆಬ್ ಸೈಟ್ http://slotbooking.karnatakasmartcityin/ ನಲ್ಲಿ (ಅರ್ಜಿಯನ್ನು ಅಪ್ ಲೋಡ್ ಮಾಡಲು 10 ನಿಮಿಷಗಳ ಕಾಲಾವಕಾಶವಿರುತ್ತದೆ) ಬುಕ್ ಮಾಡಿಕೊಂಡು ಬಾಕಿ ಉಳಿದಿರುವ ಅರ್ಜಿಗಳಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಸಲ್ಲಿಸಿ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳುವಂತೆ ಮಹಾನಗರಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












0 comments:
Post a Comment