ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕೊರಿಯರ್ ಮೂಲಕ ಎಂಡಿಎಂ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಖದೀಮರ ಬಂಧನ, ಒಂದೂವರೆ ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ - Karavali Times ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕೊರಿಯರ್ ಮೂಲಕ ಎಂಡಿಎಂ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಖದೀಮರ ಬಂಧನ, ಒಂದೂವರೆ ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ - Karavali Times

728x90

9 October 2026

ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕೊರಿಯರ್ ಮೂಲಕ ಎಂಡಿಎಂ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಖದೀಮರ ಬಂಧನ, ಒಂದೂವರೆ ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ

ಮಂಗಳೂರು, ಅಕ್ಟೋಬರ್ 09, 2026 (ಕರಾವಳಿ ಟೈಮ್ಸ್) : ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಬಂಧಿಸಿ, ಅವರುಗಳಿಂದ ಸುಮಾರು 1 ಕೋಟಿ 58 ಲಕ್ಷದ 34 ಸಾವಿರ ರೂಪಾಯಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. 

ಮಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ  ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಅ 8 ರಂದು ರಾತ್ರಿ 10 ಗಂಟೆಗೆ ಉಳ್ಳಾಲ ತಾಲುಕು ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ, ಮಂಗಳ್ಪಾಡಿ-ಬೈದಲಾ ಎಂಬಲ್ಲಿನ ಅನೀಸಾ ಮಂಝಿಲ್ ನಿವಾಸಿ ಅಬ್ದುಲ್ ಹಾಫೀಳ್ (25), ಮಂಗಳೂರು-ಕೂಳೂರು, ಕಸಬಾ ಬೆಂಗ್ರೆ ಪಿ ಬಾವಾ ಹೌಸ್ ನಿವಾಸಿ ಜಿಯಾವುಲ್ ಹಕ್ (30) ಹಾಗೂ ಮೂಲತಃ ಬಜಾಲ್ ಜಲ್ಲಿಗುಡ್ಡೆ, ಫೈಸಲ್ ನಗರ ಸಿರಿಸೀಮೆ ಹತ್ತಿರದ ನಿವಾಸಿ, ಪ್ರಸ್ತುತ ಪಾಂಡೇಶ್ವರ ಓಲ್ಡ್ ಕೆಂಟ್ ರೋಡ್, ಆಯಿಷಾ ಅಪಾರ್ಟ್‍ಮೆಂಟ್ ಫ್ಲ್ಯಾಟ್ ನಲ್ಲಿ ವಾಸವಾಗಿರುವ ಅಲ್ತಾಫ್ (28) ಎಂದು ಹೆಸರಿಸಲಾಗಿದೆ. 

ಬಂಧಿತ ಆರೋಪಿಗಳಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ ಹಾಗೂ 3 ಮೊಬೈಲ್ ಫೆÇೀನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕು ಸ್ವೀಪ್ಟ್ ಕಾರು ಮತ್ತು ಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್, ವಾಟರ್ ಪ್ಯೂರಿಪಾಯರ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,63,84,000/- ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆರೋಪಿ ಅಬ್ದುಲ್ ಹಾಪೀಲ್ ಎಂಬಾತನ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣ ಮತ್ತು ಆರೋಪಿ ಜಿಯಾವುಲ್ ಹಕ್ ಎಂಬಾತನ ವಿರುದ್ದ  ದುಬೈ ದೇಶದ ರಾಸ್-ಅಲ್-ಖೈಮಾ ಎಂಬಲ್ಲಿ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ 3 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಬಳಿಕ ಭಾರತಕ್ಕೆ ಬಂದಿರುವುದಾಗಿದೆ. ಹಾಗೂ ಆರೋಪಿ ಅಲ್ತಾಫ್ ಎಂಬಾತನ ವಿರುದ್ದ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. 

ಆರೋಪಿಗಳು ಪಂಜಾಬ್ ರಾಜ್ಯದ ಅಮೃತಸರದಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್ ನೀರು ಸಂಗ್ರಹವಾಗುವ ಸ್ಥಳದಲ್ಲಿ ಭದ್ರವಾಗಿ ಒಳಗೆ ಇರಿಸಿ, ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ನಂತರ ಈ ಮಾದಕ ವಸ್ತುವನ್ನು ಕೇರಳ ರಾಜ್ಯ ಹಾಗೂ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದು, ಪ್ರಾರಂಭದಲ್ಲಿಯೇ ಜಾಲವನ್ನು ಪತ್ತೆಹಚ್ಚುವಲ್ಲಿ ಮತ್ತು ತಡೆಗಟ್ಟುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕೊರಿಯರ್ ಮೂಲಕ ಎಂಡಿಎಂ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಖದೀಮರ ಬಂಧನ, ಒಂದೂವರೆ ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ Rating: 5 Reviewed By: karavali Times
Scroll to Top