ಬಂಟ್ವಾಳ, ಅಕ್ಟೋಬರ್ 14, 2026 (ಕರಾವಳಿ ಟೈಮ್ಸ್) : ನವರಾತ್ರಿ ಮಹೋತ್ಸವದ ನಾಲ್ಕನೇ ದಿನವಾದ ಅಕ್ಟೋಬರ್ 14 ರಂದು ಬುಧವಾರ ಪೆÇಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರ ಸೇವಾರ್ಥವಾಗಿ ಚಂಡಿಕಾ ಯಾಗ ನೆರವೇರಿತು.
ಸಂಸದ ಕ್ಯಾ ಬ್ರಿಜೇಶ್ ಚೌಟ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಉದಯ ಕುಮಾರ್ ರಾವ್, ಗೋವಿಂದ ಪ್ರಭು, ಚೆನ್ನಪ್ಪ ಕೋಟ್ಯಾನ್, ದೇವಪ್ಪ ಪೂಜಾರಿ, ಸುದರ್ಶನ್ ಬಜ, ಶಿವಪ್ರಸಾದ್ ಕರೋಪಾಡಿ ಸಹಿತ ಹಲವು ಮಂದಿ ಭಾಗವಹಿಸಿದ್ದರು.
ಯಾಗದ ಬಳಿಕ ಪೂರ್ಣಾಹುತಿ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12 ಗಂಟೆಗೆ ಶ್ರೀ ರಾಜರಾಜೇಶ್ವರಿ ದೇವಿಗೆ ಮಹಾಪೂಜೆ ನೆರವೇರಿತು. ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಭಾಗವಹಿಸಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.


















0 comments:
Post a Comment