ಮಂಗಳೂರು, ಅಕ್ಟೋಬರ್ 06, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಮಾಸಿಕ ಸಭೆಯು ಮುಡಾ ಕಚೇರಿಯ ಸಭಾಂಗಣದಲ್ಲಿ ಅ 6 ರಂದು ನಡೆಯಿತು.
ಸಭೆಯಲ್ಲಿ ಮಂಗಳೂರು ನಗರದ ಅಭಿವೃದ್ಧಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿನ ವಿವಿಧ ಯೋಜನೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಶಾಸಕರುಗಳಾದ ಐವನ್ ಡಿಸೋಜಾ, ವೇದವ್ಯಾಸ ಕಾಮತ್, ಮುಡಾ ಆಯುಕ್ತ ಮೊಹಮ್ಮದ್ ನಝೀರ್, ಪ್ರಾಧಿಕಾರದ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.














0 comments:
Post a Comment