ನವರಾತ್ರಿ ಹಿನ್ನಲೆ : ಸಂಜೆ 4 ಗಂಟೆಯಿಂದ ರಾತ್ರಿ 12ರ ವರೆಗೆ ಮದ್ಯ ಮಾರಾಟ ನಿಷೇಧಿಸಿ ಡೀಸಿ ಆದೇಶ - Karavali Times ನವರಾತ್ರಿ ಹಿನ್ನಲೆ : ಸಂಜೆ 4 ಗಂಟೆಯಿಂದ ರಾತ್ರಿ 12ರ ವರೆಗೆ ಮದ್ಯ ಮಾರಾಟ ನಿಷೇಧಿಸಿ ಡೀಸಿ ಆದೇಶ - Karavali Times

728x90

14 October 2026

ನವರಾತ್ರಿ ಹಿನ್ನಲೆ : ಸಂಜೆ 4 ಗಂಟೆಯಿಂದ ರಾತ್ರಿ 12ರ ವರೆಗೆ ಮದ್ಯ ಮಾರಾಟ ನಿಷೇಧಿಸಿ ಡೀಸಿ ಆದೇಶ

ಮಂಗಳೂರು, ಅಕ್ಟೋಬರ್ 14, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾದ್ಯಂತ ನವರಾತ್ರಿ ಹಬ್ಬದ ಪ್ರಯುಕ್ತ ಶಾರದಾ ಮಹೋತ್ಸವ ಕಾರ್ಯಕ್ರಮ ಹಾಗೂ ಮೆರವಣಿಗೆ ನಡೆಯುವ ಸಮಯದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಅಗತ್ಯತೆಯನ್ನು ಮನಗಂಡು ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಅಗತ್ಯವಿರುವುದರಿಂದ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ಘಟಕ ವ್ಯಾಪ್ತಿಯಲ್ಲಿ  ಶೋಭಾಯಾತ್ರೆ/ ಮೆರವಣಿಗೆ ದಿನದಂದು  ಆಯಾ  ಪ್ರದೇಶ ವ್ಯಾಪ್ತಿಯಲ್ಲಿ ಸಂಜೆ 4 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಬಾರ್ ಮತ್ತು ವೈನ್ ಶಾಪ್ ಗಳು ಸೇರಿದಂತೆ ಎಲ್ಲಾ ಪ್ರಕಾರದ ಮದ್ಯದಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ನವರಾತ್ರಿ ಹಿನ್ನಲೆ : ಸಂಜೆ 4 ಗಂಟೆಯಿಂದ ರಾತ್ರಿ 12ರ ವರೆಗೆ ಮದ್ಯ ಮಾರಾಟ ನಿಷೇಧಿಸಿ ಡೀಸಿ ಆದೇಶ Rating: 5 Reviewed By: karavali Times
Scroll to Top