ಮಂಗಳೂರು, ಅಕ್ಟೋಬರ್ 14, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ಅಕ್ಟೋಬರ್ 26 ರಿಂದ 29 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಕ್ಟೋಬರ್ 26 ರಂದು ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, ನಂತರ ಉಡುಪಿಗೆ ತೆರಳಲಿದ್ದಾರೆ. ಅಕ್ಟೋಬರ್ 28 ರಂದು ಮಂಗಳೂರು ಪ್ರವಾಸಿ ಮಂದಿರ ಆಗಮನ, ಅಕ್ಟೋಬರ್ 29 ರಂದು ಬೆಳಿಗ್ಗೆ 11 ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 3ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಕುಂದುಕೊರತೆ ವಿಚಾರಣೆ, ಸಂಜೆ 4ಕ್ಕೆ ಪತ್ರಿಕಾಗೋಷ್ಠಿ, 4.15ಕ್ಕೆ ಅಲ್ಪಸಂಖ್ಯಾತರ ಪ್ರದೇಶಗಳಲ್ಲಿರುವ ಅಂಗನವಾಡಿ ಮತ್ತು ಶಾಲೆಗಳಿಗೆ ಭೇಟಿ, ರಾತ್ರಿ 9.35ಕ್ಕೆ ಅಧ್ಯಕ್ಷರು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.












0 comments:
Post a Comment