ಬ್ರಹ್ಮರಕೂಟ್ಲು : ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ, ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಕ್ಕೆ - Karavali Times ಬ್ರಹ್ಮರಕೂಟ್ಲು : ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ, ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಕ್ಕೆ - Karavali Times

728x90

9 October 2026

ಬ್ರಹ್ಮರಕೂಟ್ಲು : ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ, ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಕ್ಕೆ

ಬಂಟ್ವಾಳ, ಅಕ್ಟೋಬರ್ 09, 2026 (ಕರಾವಳಿ ಟೈಮ್ಸ್) : ತಾಲೂಕಿನ ಬ್ರಹ್ಮರಕೂಟ್ಲು ಬಳಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಸಹಿತ ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ಅ 8 ರಂದು ನಡೆದಿದೆ. 

ಬಂಧಿತ ಆರೋಪಿಯನ್ನು ಪುದು ಗ್ರಾಮದ ನಿವಾಸಿ ಪ್ರಸ್ತುತ ಫರಂಗಿಪೇಟೆ ಟಿ ಕೆ ಫ್ಲಾಟ್ ಎಂಬಲ್ಲಿ ವಾಸವಾಗಿರುವ ಅಶ್ರಫ್ ಯಾನೆ ಮಹಮ್ಮದ್ ಅಶ್ರಫ್ (48) ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ಸಂದೀಪ್ ಕುಮಾರ್ ಶಟ್ಟಿ ಅವರ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. 

ಆರೋಪಿಯಿಂದ ಕಪ್ಪು ಬಣ್ಣದ ಆಕ್ಟಿವಾ ದ್ವಿಚಕ್ರ ವಾಹನ ಸಹಿತ 1,21,740/- ರೂಪಾಯಿ ಮೌಲ್ಯದ ಒಟ್ಟು 60.87 ಗ್ರಾಂ ತೂಕದ ಮಾದಕ ವಸ್ತುಗಳು, ಮೊಬೈಲ್ ಫೋನ್ ಗಳು, ತೂಕದ ಮಾಪನಗಳು, 1,870/- ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,93,610/- ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬ್ರಹ್ಮರಕೂಟ್ಲು : ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ, ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಕ್ಕೆ Rating: 5 Reviewed By: karavali Times
Scroll to Top