ಮಂಗಳೂರು, ಅಕ್ಟೋಬರ್ 30, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಉದ್ಯಾನವನಗಳ ಅಗತ್ಯವಿದ್ದು ಈ ಉದ್ಯಾನವನದ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರು ಮಂಗಳೂರಿನ ಹೃದಯಭಾಗದಲ್ಲಿ ಉದ್ಯಾನವನ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿಶೇಷ ಆಸಕ್ತಿ ಹೊಂದಿ ಸ್ಥಳ ಪರಿಶೀಲನೆ ನಡೆಸಿದರು.
ಮಣ್ಣಗುಡ್ಡೆಯಲ್ಲಿರುವ ಸೇವಕ್ ಗಾರ್ಡನ್ ಹಾಗೂ ಮಹಾಕಾಳಿ ಪಡ್ಪು ಬಳಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಂಗಳೂರು ನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಮ್ ಪಾಂಡೆ, ಮುಡಾ ಆಯುಕ್ತ ಮುಹಮ್ಮದ್ ನಝೀರ್ ಸಹಿತ ನಗರ ಪಾಲಿಕೆ ಹಾಗೂ ಮುಡಾದ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರಿನ ನಗರ ಪ್ರದೇಶದಲ್ಲಿ ಸಾರ್ವಜನಿಕರಿಗೆ ವಿಶ್ರಾಂತಿ, ವಾಯು ವಿಹಾರ ಹಾಗೂ ಮನರಂಜನೆಗೆ ಅನುಕೂಲವಾಗುವ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಮೂಲಕ ನಗರದ ಜನರಿಗೆ ಉತ್ತಮ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಸ್ಥಳ ಪರಿಶೀಲನೆ ಮಹತ್ವ ಪಡೆದಿದೆ.












0 comments:
Post a Comment