ವಿವಿಧ ನಿಗಮಗಳ ಅಧ್ಯಕ್ಷರುಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಮುನಿಯಪ್ಪ - Karavali Times ವಿವಿಧ ನಿಗಮಗಳ ಅಧ್ಯಕ್ಷರುಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಮುನಿಯಪ್ಪ - Karavali Times

728x90

11 October 2026

ವಿವಿಧ ನಿಗಮಗಳ ಅಧ್ಯಕ್ಷರುಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಮುನಿಯಪ್ಪ

ಬೆಂಗಳೂರು, ಅಕ್ಟೋಬರ್ 11, 2026 (ಕರಾವಳಿ ಟೈಮ್ಸ್) : ಸಮಾಜ ಕಲ್ಯಾಣ ಇಲಾಖಾ ಸಚಿವ ಕೆ ಎಚ್ ಮುನಿಯಪ್ಪ ಅವರು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಎಲ್ಲಾ ನಿಗಮಗಳ ಅಧ್ಯಕ್ಷರು ಹಾಗೂ  ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಇತ್ತೀಚೆಗೆ ಸಭೆ ನಡೆಸಿದರು.

ನಿಗಮಗಳ ಸಮಸ್ಯೆಗಳು ಹಾಗೂ ಆಯವ್ಯಯದಲ್ಲಿ  ಘೋಷಿಸಿರುವ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ  ಸಂಬಂಧಿಸಿದಂತೆ ಸಭೆಯಲ್ಲಿ ಅಧ್ಯಕ್ಷರು ಸಚಿವರಿಗೆ ಪ್ರಸ್ತಾಪಿಸಿದರು. ಎಸ್ ಸಿ ಎಸ್ ಪಿ ಅನುದಾನ ಹಂಚಿಕೆಯಿಂದ ಸಮುದಾಯದ ಬಲವರ್ಧನೆಗೆ ಸಹಕಾರಿಯಾಗಲಿದ್ದು ಈ ನಿಗಮಗಳ ಮೂಲಕ  ಸಮುದಾಯಗಳ ಅಭಿವೃದ್ಧಿಯನ್ನು ಮಾಡಲು ಸೂಕ್ತ ಅನುದಾನ ಹಂಚಿಕೆ ಮಾಡಿವುದರೊಂದಿಗೆ ನೂತನ ಕಾರ್ಯಕ್ರಮಗಳ ಅನುಷ್ಠಾನ ಮಾಡಲು ಸಚಿವರು ಸೂಚಿಸಿದರು.

ಪೌರಕಾರ್ಮಿಕರ ಮಕ್ಕಳ ವಿಧ್ಯಾಭ್ಯಾಸಕ್ಕೆ ಅನುಗುಣವಾಗಿ ವಿಶೇವಾಗಿ ಬೆಂಗಳೂರು ನಗರದಲ್ಲಿ ವಸತಿ ಶಾಲೆಗಳನ್ನು ನಿರ್ಮಾಣ ಮಾಡುವ ಕುರಿತು ಒಂದು ಸಮಿತಿ ರಚಿಸಿ ಅದರ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತಿಳಿಸಿದಾಗ ಇದರ ಕುರಿತು ಕ್ರಮವಹಿಸಲಿದ್ದಾರೆ ಎಂದರು.

ರಾಜ್ಯದಲ್ಲಿರುವ ಅಂಬೇಡ್ಕರ್ ಭವನಗಳಲ್ಲಿ ಗ್ರಂಥಾಲಯಗಳ ಸ್ಥಾಪನೆ ಮೂಡುವುದರೊಂದಿಗೆ ಕಲಿಕೆಯ ಗುಣಮಟ್ಟ ಹೆಚ್ಚಿಸಲು ಕ್ರಮವಹಿಸಲಾಗುವುದು  ಎಂದರು. 

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಂದ್ರ, ಬಾಬು ಜಗಜೀವನ್ ರಾಂ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜು, ಆಧಿ ಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಅಶೋಕ ಸಾಲಪ್ಪ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಯ್ಯ, ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಲ್ಲವಿ, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷ ಆಗ ಸುಲ್ತಾನ್ ಮುರ್ತಾಜ್ ಹಾಗೂ  ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ವಿವಿಧ ನಿಗಮಗಳ ಅಧ್ಯಕ್ಷರುಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಮುನಿಯಪ್ಪ Rating: 5 Reviewed By: karavali Times
Scroll to Top