ಮಂಗಳೂರು, ಅಕ್ಟೋಬರ್ 31, 2026 (ಕರಾವಳಿ ಟೈಮ್ಸ್) : ಮಂಗಳೂರಿನ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹನಿರ್ದೇಶಕ ಹಾಗೂ ಪ್ರಾಂಶುಪಾಲರಾಗಿ ಓ.ಆರ್. ಪ್ರ್ರಕಾಶ್ ಅಧಿಕಾರ ವಹಿಸಿಕೊಂಡಿದ್ದಾರೆ. ಸಹನಿರ್ದೇಶಕರ ಸ್ಥಾನದ ವ್ಯಾಪ್ತಿಯ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಈ ನಾಲ್ಕು ಜಿಲ್ಲೆಗಳನ್ನು ಒಳಗೊಂಡಿದೆ.
ಸಂಸ್ಥೆಯ ಪ್ರಾಂಶುಪಾಲರು ಮೇಲಿನ ನಾಲ್ಕು ಜಿಲ್ಲೆಗಳ ಪ್ರಾಥಮಿಕ, ಪ್ರೌಢ ಮತ್ತು ಬಿ.ಇಡಿ ಸಂಸ್ಥೆಗಳ ಶೈಕ್ಷಣಿಕ ಕಾರ್ಯಕ್ರಮಗಳ ಮಾರ್ಗದರ್ಶನ ಮತ್ತು ಮೇಲುಸ್ತುವಾರಿಯನ್ನು ಮಾಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಓ.ಆರ್. ಪ್ರಕಾಶ್ ಇವರು ಇದೇ ಸಂಸ್ಥೆಯಲ್ಲಿ ಪ್ರವಾಚಕರಾಗಿ ಕಾರ್ಯನಿರ್ವಹಿಸುತ್ತಿದ್ದರು.












0 comments:
Post a Comment