ಮಂಗಳೂರು, ಅಕ್ಟೋಬರ್ 02, 2026 (ಕರಾವಳಿ ಟೈಮ್ಸ್) : ನಗರದ ಪುರಭವನ ಮುಂಭಾಗದ ರಾಜಾಜಿ ಪಾರ್ಕ್ ಬಯಲು ರಂಗ ಮಂದಿರದಲ್ಲಿ ಅಕ್ಟೋಬರ್ 3 ಮತ್ತು 4 ರಂದು ಸಂಜೆ 6 ಗಂಟೆಯಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಂಗಳೂರು ಮಹಾನಗರಪಾಲಿಕೆಯು ನಿಸರ್ಗ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಕಲಾ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 3 ರಂದು ಸಂಜೆ 6 ಗಂಟೆಗೆ ಜಾದೂಗಾರ ಕುದ್ರೋಳಿ ಗಣೇಶ್ ಹಾಗೂ ಬಳಗದವರಿಂದ ಅಚ್ಚರಿ ಮತ್ತು ಅದ್ಭುತಗಳ ಜಾದೂ ಪ್ರದರ್ಶನವಿರಲಿದ್ದು, ವಿಶೇಷ ಆಕರ್ಷಣೆಯಾಗಿ ಸ್ವಚ್ಛತೆಯ ಮಹತ್ವವನ್ನು ಸಾರುವ ಜಾದೂ ಪ್ರದರ್ಶನಗೊಳ್ಳಲಿದೆ. ಸಂಜೆ 7 ಗಂಟೆಗೆ ಸರಯೂ ಬಾಲ ಯಕ್ಷಗಾನ ಮಕ್ಕಳ ಮೇಳದ ವತಿಯಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಅಕ್ಟೋಬರ್ 4 ರಂದು ಸಂಜೆ 6 ಗಂಟೆಗೆ ಸ್ವರ ಮಾಧುರ ಸಂಗೀತ ವಿದ್ಯಾಲಯದ ವತಿಯಿಂದ ದೇಶಭಕ್ತಿ ಗೀತೆ ಹಾಗೂ ಭಾವಗೀತೆ ಕಾರ್ಯಕ್ರಮ ನಡೆಯಲಿದೆ.
ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ರಾಜಾಜಿ ಪಾರ್ಕ್ ಬಯಲು ರಂಗಮಂದಿರವನ್ನು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಿದೆ. ಆಸಕ್ತ ಸಂಘಟಕರು ಮುಂಗಡ ಬುಕ್ಕಿಂಗ್ ಗಾಗಿ ಹಾಗೂ ಹೆಚ್ಚಿನ ಮಾಹಿತಿಗೆ ಮಂಗಳೂರು ಮಹಾನಗರಪಾಲಿಕೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













0 comments:
Post a Comment