ಕಡಬ, ಅಕ್ಟೋಬರ್ 15, 2026 (ಕರಾವಳಿ ಟೈಮ್ಸ್) : ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ರಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಶಿಕ್ಷೆಗೊಳಗಾದ ಅಪರಾಧಿಯನ್ನು ಕಡಬ-ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ಎಂದು ಹೆಸರಿಸಲಾಗಿದೆ. 2021 ರ ಮೇ 8 ರಂದು ಕಡಬ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಅಪ್ರಾಪ್ತ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಆಗಿನ ಪುತ್ತೂರು ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಉಮೇಶ್ ಯು. ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಧೀಶರಾದ ಸುಮಂಗಲಾ ಚಕಲಬ್ಬಿ ಅವರು, ಆರೋಪಿ ವಿರುದ್ದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಪೆÇೀಕ್ಸೊ ಕಾಯ್ದೆ 2012ರ ಕಲಂಗಳಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದ್ದಲ್ಲಿ 1 ವರ್ಷದ ಸಾಧಾರಣ ಕಾರಾಗೃಹ ಶಿಕ್ಷೆ.
ಭಾರತೀಯ ದಂಡ ಸಂಹಿತೆ ಕಲಂ 506 (ಜೀವ ಬೆದರಿಕೆ) ಅಡಿಯಲ್ಲಿ ಆರೋಪಿಗೆ 1 ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷದ ಸಾಧಾರಣ ಶಿಕ್ಷೆ ವಿಧಿಸಿ ಆದೇಶಿಸಿದ್ದು, ಒಟ್ಟು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ, ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯoತ್ತಾಯ ಅವರು ವಾದ ಮಂಡಿಸಿದ್ದಾರೆ.













0 comments:
Post a Comment