ಮಂಗಳೂರು, ಅಕ್ಟೋಬರ್ 18, 2026 (ಕರಾವಳಿ ಟೈಮ್ಸ್) : ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತ ನಗರ ವೆಲೆನ್ಸಿಯಾದಲ್ಲಿರುವ ಸೈಂಟ್ ವಿನ್ಸೆಂಟ್ ಫೆರರ್ ಚರ್ಚ್ ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಚರ್ಚಿಗೆ ಪ್ರಾರ್ಥನೆಗೆಂದು ತೆರಳಿದ್ದ ಬಾಲಕನನ್ನು ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 14 ವರ್ಷದ ಬಾಲಕನೋರ್ವ ಪೆÇೀಷಕರೊಂದಿಗೆ ತೆರಳಿ ದೂರು ನೀಡಿದ್ದ ಹಿನ್ನಲೆಯಲ್ಲಿ ಫಾದರ್ ವಿರುದ್ದ ಅ 16 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಆರೋಪಿ ಫಾದರ್ ಅವರನ್ನು ಪೊಲೀಸರು ಅ 18 ರಂದು ಸಂಬಂಧಿಕರ ಮನೆಯಿಂದ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.














0 comments:
Post a Comment