ಪುತ್ತೂರು, ಅಕ್ಟೋಬರ್ 01, 2026 (ಕರಾವಳಿ ಟೈಮ್ಸ್) : ಪುತ್ತೂರು ತಾಲೂಕಿನ ಗ್ರಾಮಮಟ್ಟದ ಪ್ರಜಾಸೇವಾ ಆಂದೋಲನ ಅಕ್ಟೋಬರ್ 3 ರಂದು ಹಿರೇಬಂಡಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಪರಾಹ್ನ 3 ರಿಂದ ನಡೆಯಲಿದೆ.
ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆ, ಬೇಡಿಕೆ ಹಾಗೂ ಸಾರ್ವಜನಿಕ ವಿಚಾರಗಳನ್ನು ನೇರವಾಗಿ ಶಾಸಕರ ಗಮನಕ್ಕೆ ತರಬಹುದಾಗಿದ್ದು, ಹಿರೇಬಂಡಾಡಿ ಗ್ರಾಮದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪುತ್ತೂರು ಶಾಸಕ ಅಶೋಕ್ ಅವರ ಅವರ ಕಚೇರಿ ಪ್ರಕಟಣೆ ತಿಳಿಸಿದೆ.













0 comments:
Post a Comment