ಪುತ್ತೂರು : ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪಿತ್ತ ನ್ಯಾಯಾಲಯ - Karavali Times ಪುತ್ತೂರು : ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪಿತ್ತ ನ್ಯಾಯಾಲಯ - Karavali Times

728x90

16 October 2026

ಪುತ್ತೂರು : ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪಿತ್ತ ನ್ಯಾಯಾಲಯ

ಪುತ್ತೂರು, ಅಕ್ಟೋಬರ್ 16, 2026 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022 ರಲ್ಲಿ ನಡೆದ ಮಹಿಳೆಯ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. 

2022 ರ ಡಿಸೆಂಬರ್ 27 ರಂದು ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾಗದ ವಿಚಾರದಲ್ಲಿ ತಕರಾರು ನಡೆದು ಮಹಿಳೆಯ ಮೇಲೆ ಮೂವರು ಆರೋಪಿಗಳು ಹಲ್ಲೆ ನಡೆಸಿ ದೌರ್ಜನ್ಯವೆಸಗಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. 

ಸದ್ರಿ ಪ್ರಕರಣದ ತನಿಖೆ  ನಡೆಸಿದ ಪುತ್ತೂರು ಗ್ರಾಮಾಂತರ ಠಾಣಾ ಆಗಿನ ಸಿಬ್ಬಂದಿ ಸುಬ್ರಮಣ್ಯ ಎಚ್ ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಅರುಣ್ ಕುಮಾರ್, ವಿನಯ ಕುಮಾರ್ ಜಿ ಹಾಗೂ ಸುಂದರ ಪಿ ಎಂ ಎಂಬವರುಗಳ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ಪುತ್ತೂರು ಎ ಎಸ್ ಸಿ ಜೆ ಹಾಗೂ ಜೆ ಎಂ ಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶ ದೇವರಾಜ್ ವೈ ಎಚ್ ಅವರು, ಆರೋಪಿಗಳ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323ರಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ, 1ನೇ ಆರೋಪಿ ಅರುಣ್ ಕುಮಾರ್ ಎಂಬಾತನಿಗೆ ಆರು ತಿಂಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಿದೆ. 

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354ರಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ, 1ನೇ ಆರೋಪಿ ಅರುಣ್ ಕುಮಾರ್ ಗೆ ಎರಡು ವರ್ಷಗಳ ಸರಳ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೆ ಅವರು 10 ಸಾವಿರ ರೂಪಾಯಿ ದಂಡ ಪಾವತಿಸುವಂತೆಯೂ ಆದೇಶಿಸಲಾಗಿದೆ. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿಯಾಗಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸುಂತೆ ಆದೇಶಿಸಲಾಗಿದೆ. 

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506ರಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ, ಮೂವರೂ  ಆರೋಪಿಗಳಿಗೆ ತಲಾ ಒಂದು ವರ್ಷದ ಸರಳ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗಿದೆ. ಜೊತೆಗೆ, ಪ್ರತಿಯೊಬ್ಬರೂ 5 ಸಾವಿರ ರೂಪಾಯಿಗಳ ದಂಡವನ್ನು ಪಾವತಿಸಬೇಕಾಗಿದ್ದು, ದಂಡವನ್ನು ಪಾವತಿಸಲು ವಿಫಲರಾದಲ್ಲಿ ಹೆಚ್ಚುವರಿಯಾಗಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ. ಸಹಾಯಕ ಸರ್ಕಾರಿ ಅಭಿಯೋಜಕಿ ಚೇತನಾ ದೇವಿ ಅವರು ನ್ಯಾಯಾಲಯದಲ್ಲಿ ವಾದಮಂಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು : ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪಿತ್ತ ನ್ಯಾಯಾಲಯ Rating: 5 Reviewed By: karavali Times
Scroll to Top