ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿದ್ದ 9 ವರ್ಷದ ಬಾಲಕನನ್ನು ರಕ್ಷಿಸಿದ ರೈಲ್ವೆ ರಕ್ಷಣಾ ಪಡೆ - Karavali Times ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿದ್ದ 9 ವರ್ಷದ ಬಾಲಕನನ್ನು ರಕ್ಷಿಸಿದ ರೈಲ್ವೆ ರಕ್ಷಣಾ ಪಡೆ - Karavali Times

728x90

10 October 2026

ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿದ್ದ 9 ವರ್ಷದ ಬಾಲಕನನ್ನು ರಕ್ಷಿಸಿದ ರೈಲ್ವೆ ರಕ್ಷಣಾ ಪಡೆ

ಮಂಗಳೂರು, ಅಕ್ಟೋಬರ್ 10, 2026 (ಕರಾವಳಿ ಟೈಮ್ಸ್) : “ನನ್ಹೆ ಫರಿಶ್ತೆ” ಕಾರ್ಯಾಚರಣೆಯಡಿ ರೈಲ್ವೆ ನಿಲ್ದಾಣಗಳಲ್ಲಿ ಪತ್ತೆಯಾಗುವ ಕಾಣೆಯಾದ, ಮನೆಯಿಂದ ತಪ್ಪಿಸಿಕೊಂಡು ಬಂದಿರುವ ಹಾಗೂ ಅಪಾಯದ ಪರಿಸ್ಥಿತಿಯಲ್ಲಿರುವ ಮಕ್ಕಳನ್ನು ರೈಲ್ವೆ ರಕ್ಷಣಾ ಪಡೆ ರಕ್ಷಿಸಿ, ಅವರ ಸುರಕ್ಷತೆ ಮತ್ತು ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಸಂಬಂಧಿತ ಮಕ್ಕಳ ಕಲ್ಯಾಣ ಪ್ರಾಧಿಕಾರಗಳಿಗೆ ಹಸ್ತಾಂತರಿಸುತ್ತದೆ.

ಅಕ್ಟೋಬರ್ 10 ರಂದು ಬೆಳಿಗ್ಗೆ 9.49ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಿಸಿ ಟಿವಿ ಕಣ್ಗಾವಲು ನಡೆಸುತ್ತಿದ್ದ ಸಂದರ್ಭ ಆರ್ ಪಿ ಎಫ್ ಸಿಬ್ಬಂದಿ ಕುಮಾರಿ ವಿನಿಶಾ ಅವರು ಸಿಸಿ ಟಿವಿ ಕ್ಯಾಮೆರಾದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿದ್ದ 9 ವರ್ಷದ ಬಾಲಕನನ್ನು ಗಮನಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಆರ್ ಪಿ ಎಫ್ ಸಿಬ್ಬಂದಿ ಬಾಲಕನನ್ನು ಸುರಕ್ಷಿತವಾಗಿ ರಕ್ಷಿಸಿದರು.

ಪ್ರಾಥಮಿಕ ವಿಚಾರಣೆಯ ವೇಳೆ ಬಾಲಕನು ಪಶ್ಚಿಮ ಬಂಗಾಳದ ನಿವಾಸಿಯಾಗಿದ್ದು, ಮನೆಯಿಂದ ಹೊರಬಂದು ರೈಲು ಸಂಖ್ಯೆ 22851 ಸಾಂತ್ರಾಗಾಚಿ ಎಕ್ಸ್‍ಪ್ರೆಸ್ ನಲ್ಲಿ ಪ್ರಯಾಣಿಸಿರುವುದು ತಿಳಿದುಬಂದಿದೆ. ರಕ್ಷಣೆಯ ನಂತರ, ನಿಗದಿತ ಕಾರ್ಯ ವಿಧಾನದಂತೆ ಬಾಲಕನ ಮುಂದಿನ ಆರೈಕೆ, ರಕ್ಷಣೆ ಮತ್ತು ಪುನರ್ವಸತಿಗಾಗಿ ಮಂಗಳೂರಿನ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಗೆ ಹಸ್ತಾಂತರಿಸಲಾಯಿತು.

“ನನ್ಹೆ ಫರಿಶ್ತೆ” ಕಾರ್ಯಾಚರಣೆಯಡಿ ಆರ್ ಪಿ ಎಫ್ ಸಿಬ್ಬಂದಿ ತ್ವರಿತವಾಗಿ ಕೈಗೊಂಡ ಈ ಕ್ರಮವು ಮಕ್ಕಳ ಸುರಕ್ಷತೆ ಮತ್ತು ಕಲ್ಯಾಣವನ್ನು ಖಚಿತಪಡಿಸಿಕೊಳ್ಳುವಲ್ಲಿ ಭಾರತೀಯ ರೈಲ್ವೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿದ್ದ 9 ವರ್ಷದ ಬಾಲಕನನ್ನು ರಕ್ಷಿಸಿದ ರೈಲ್ವೆ ರಕ್ಷಣಾ ಪಡೆ Rating: 5 Reviewed By: karavali Times
Scroll to Top