ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ನಷ್ಟು ಸುಲಭಗೊಳಿಸಲು ರಾಜ್ಯ ಸರಕಾರ ಕ್ರಮ : ಸಕಾಲ ವ್ಯಾಪ್ತಿಗೆ ಭೌತಿಕ ಆರ್.ಟಿ.ಐ. ಅರ್ಜಿಗಳ ಸೇರ್ಪಡೆ, ಸೇವಾ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ - Karavali Times ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ನಷ್ಟು ಸುಲಭಗೊಳಿಸಲು ರಾಜ್ಯ ಸರಕಾರ ಕ್ರಮ : ಸಕಾಲ ವ್ಯಾಪ್ತಿಗೆ ಭೌತಿಕ ಆರ್.ಟಿ.ಐ. ಅರ್ಜಿಗಳ ಸೇರ್ಪಡೆ, ಸೇವಾ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ - Karavali Times

728x90

18 October 2026

ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ನಷ್ಟು ಸುಲಭಗೊಳಿಸಲು ರಾಜ್ಯ ಸರಕಾರ ಕ್ರಮ : ಸಕಾಲ ವ್ಯಾಪ್ತಿಗೆ ಭೌತಿಕ ಆರ್.ಟಿ.ಐ. ಅರ್ಜಿಗಳ ಸೇರ್ಪಡೆ, ಸೇವಾ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು, ಅಕ್ಟೋಬರ್ 18, 2026 (ಕರಾವಳಿ ಟೈಮ್ಸ್) : ನಾಗರಿಕರಿಗೆ ಮಾಹಿತಿ ಹಕ್ಕು (ಆರ್‍ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು ಪ್ರಮುಖ ಹಾಗೂ ನೂತನ ನಿರ್ಧಾರಗಳನ್ನು ಕೈಗೊಂಡಿದೆ.  

ಭೌತಿಕ ಆರ್‍ಟಿಐ ಅರ್ಜಿಗಳ ದಾಖಲಾತಿ ಈಗ ‘ಸಕಾಲ’ ಸೇವೆ : 

ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್‍ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್‍ಟಿಐ ಆನ್ ಲೈನ್ ಪೆÇೀರ್ಟಲ್ ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು.  

ಇದನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011ರಡಿಯಲ್ಲಿ ಖಾತ್ರಿ ಸೇವೆಯಾಗಿ ಅಧಿಸೂಚಿಸಲಾಗಿದೆ.  ಇದರಿಂದ ಪ್ರತಿಯೊಬ್ಬ ಅರ್ಜಿದಾರರಿಗೂ ಆನ್ ಲೈನ್ ನೋಂದಣಿ ಸಂಖ್ಯೆ ದೊರೆಯಲಿದ್ದು, ಅರ್ಜಿಯ ಸ್ಥಿತಿಗತಿಯನ್ನು  ಯಾವಾಗ ಬೇಕಾದರೂ ಪರಿಶೀಲಿಸಬಹುದು.  

ಅರ್ಜಿಗಳು ಕಳೆದು ಹೋಗುವ ಅಥವಾ ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆ ಇರುವುದಿಲ್ಲ. ನಿಯಮಿತ ದಿನಗಳಲ್ಲಿ ಪೆÇೀರ್ಟಲ್ ನಲ್ಲಿ ದಾಖಲಿಸದಿದ್ದರೆ ನಾಗರಿಕರು ಸಕಾಲ ಕಾಯ್ದೆಯಡಿ ಪರಿಹಾರ ವೆಚ್ಚ ಪಡೆಯಲು ಅರ್ಹರಾಗಿರುತ್ತಾರೆ ಹಾಗೂ ಸಂಬಂಧಪಟ್ಟ ಅಧಿಕಾರಿಯೇ ಇದಕ್ಕೆ ಹೊಣೆಗಾರರಾಗುತ್ತಾರೆ.  

ಎಲ್ಲಾ ಒನ್ ಕೇಂದ್ರಗಳಲ್ಲಿ ಆನ್ ಲೈನ್ ಆರ್‍ಟಿಐ ಸೇವೆ ಲಭ್ಯ :

ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನ್ನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್ ಲೈನ್ ಆರ್‍ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ.  

ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದು. ನಿಗದಿತ ಆರ್‍ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಿ, ಸ್ಥಳದಲ್ಲೇ ಆನ್ ಲೈನ್ ಸ್ವೀಕೃತಿ ಪಡೆಯಬಹುದು.  

ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ಒನ್’ ಕೇಂದ್ರಗಳ ಮೂಲಕ ಈಗ ಹಳ್ಳಿಯ ಪ್ರತಿಯೊಬ್ಬ ನಾಗರಿಕರಿಗೂ ಆನ್ ಲೈನ್ ಆರ್‍ಟಿಐ ಸೌಲಭ್ಯ ತಲುಪಿದೆ. 

ಪ್ರಮುಖ ಪ್ರಯೋಜನಗಳು :

ಏಕರೂಪದ ವೇದಿಕೆ : ಭೌತಿಕ, ಆನ್ ಲೈನ್ ಅಥವಾ ಸೇವಾ ಕೇಂದ್ರಗಳ ಮೂಲಕ ಬರುವ ಎಲ್ಲಾ ಅರ್ಜಿಗಳು ಒಂದೇ ವೇದಿಕೆಯಡಿ ಬರಲಿವೆ.  

ಪಾರದರ್ಶಕತೆ : ಆರ್‍ಟಿಐ ಕಾಯ್ದೆ 2005ರ ಕಾಲಮಿತಿಗಳ ಪಾಲನೆಯನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು.  

ಇದರಿಂದ  ಮಾಹಿತಿ ಅಧಿಕಾರಿಗಳಿಂದಾಗುವ ವಿಳಂಬವನ್ನು ಶೀಘ್ರವಾಗಿ ಗುರುತಿಸಬಹುದು. ನಾಗರಿಕರಿಗೆ ತಮ್ಮ ಅರ್ಜಿಗಳ ವಿಶ್ವಾಸಾರ್ಹ ದಾಖಲೆ ಲಭ್ಯವಾಗುತ್ತದೆ.  

ಸಾರ್ವಜನಿಕರು ನೇರವಾಗಿ ಆನ್ ಲೈನಿನಲ್ಲಾಗಲಿ ಅಥವಾ ತಮ್ಮ ಸಮೀಪದ ಸೇವಾ ಕೇಂದ್ರಗಳ (ಬೆಂಗಳೂರು ಒನ್/ ಕರ್ನಾಟಕ ಒನ್/ ಗ್ರಾಮ ಒನ್) ಮೂಲಕವಾಗಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ನಷ್ಟು ಸುಲಭಗೊಳಿಸಲು ರಾಜ್ಯ ಸರಕಾರ ಕ್ರಮ : ಸಕಾಲ ವ್ಯಾಪ್ತಿಗೆ ಭೌತಿಕ ಆರ್.ಟಿ.ಐ. ಅರ್ಜಿಗಳ ಸೇರ್ಪಡೆ, ಸೇವಾ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ Rating: 5 Reviewed By: karavali Times
Scroll to Top