ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ - Karavali Times ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ - Karavali Times

728x90

29 October 2026

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಕಡಬ, ಅಕ್ಟೋಬರ್ 29, 2026 (ಕರಾವಳಿ ಟೈಮ್ಸ್) : ಕಡಬ ಠಾಣಾ ವ್ಯಾಪ್ತಿಯ ನಿವಾಸಿ, ಅಪ್ರಾಪ್ತೆ ಬಾಲಕಿಯನ್ನು ಕೊಂಡೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ನೆಲ್ಯಾಡಿ ನಿವಾಸಿ ರವಿ @ ರವೀಂದ್ರ ಆಚಾರ್ಯ (32) ಎಂಬಾತನಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. 

ಅಪರಾಧಿ ವಿರುದ್ದ ವಿರುದ್ದ  ಕಡಬ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 208/18 ರಂತೆ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಅಂದಿನ ಉಪ್ಪಿನಂಗಡಿ ಪೆÇಲೀಸ್ ಇನ್ಸ್ ಪೆಕ್ಟರ್ ಡಿ. ಮಂಜುನಾಥ್ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ಮಂಗಳೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಕಾರ್ಯನಿರ್ವಹಣೆ-ಪುತ್ತೂರು) ಇಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಮಂಗಲ ಅವರು, ಆರೋಪಿಯ ವಿರುದ್ದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, 2012 ರ ಪೋಕ್ಸೋ ಕಾಯ್ದೆಯ ಸೆಕ್ಷನ್ 6 ರೊಂದಿಗೆ ಓದಲಾದ ಸೆಕ್ಷನ್ 5(1) ರ ಅಡಿಯಲ್ಲಿ ಶಿಕ್ಷಾರ್ಹವಾದ ಅಪರಾಧಕ್ಕಾಗಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರೂಪಾಯಿಗಳ ದಂಡ, ದಂಡ ಪಾವತಿಸಲು ವಿಫಲವಾದರೆ ಒಂದು ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. 

ಐ.ಪಿ.ಸಿ. ಸೆಕ್ಷನ್ 506ರಡಿಯಲ್ಲಿ ಶಿಕ್ಷಾರ್ಹವಾದ ಅಪರಾಧಕ್ಕಾಗಿ ಒಂದು ವರ್ಷದ ಅವಧಿಗೆ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡ, ದಂಡ ಪಾವತಿಸಲು ವಿಫಲವಾದರೆ, ಒಂದು ವರ್ಷದ ಕಠಿಣ ಜೈಲು ಶಿಕ್ಷೆ. (ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗುವಂತೆ) ಅದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡoತ್ಯಾಯ ಅವರು ಸರಕಾರದ ಪರವಾಗಿ ವಾದಮಂಡಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ Rating: 5 Reviewed By: karavali Times
Scroll to Top