ಕಡಬ, ಅಕ್ಟೋಬರ್ 29, 2026 (ಕರಾವಳಿ ಟೈಮ್ಸ್) : 2019 ರಲ್ಲಿ ಅಪ್ರಾಪ್ತ ಬಾಲಕಿಯೋರ್ವಳ ಮನೆಗೆ ಬಂದು ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆಗೆ ಸಂಬಂಧಿಸಿದಂತೆ, ಕಡಬ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಕಡಬ-ನೂಜಿ ಬಾಳ್ತಿಲ ನಿವಾಸಿ ಸದ್ದಾಂ (34) ಎಂಬಾತನಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಅಂದಿನ ಉಪ್ಪಿನಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ನಾಗೇಶ್ ಕೆ ಅವರು ಪ್ರಕರಣದ ವಿಚಾರಣೆ ನಡೆಸಿ ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಜಿಲ್ಲಾ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು (ಕಾರ್ಯನಿರ್ವಹಣೆ : ಪುತ್ತೂರು) ಇಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು ಆರೋಪಿ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ
ಪೆÇೀಕ್ಸೋ ಕಾಯ್ದೆಯ ಸೆಕ್ಷನ್ 6 ರಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ, ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ.
ಐ.ಪಿ.ಸಿ ಸೆಕ್ಷನ್ 506 ರಡಿಯಲ್ಲಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ (ಸದ್ರಿ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ.
ಸದ್ರಿ ಆರೋಪಿಯು ಕಡಬ ಪೆÇಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಆತನ ವಿರುದ್ದ ಕಡಬ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 59/2011, ಅಪರಾಧ ಕ್ರಮಾಂಕ 62/20, ಅಪರಾಧ ಕ್ರಮಾಂಕ 27/21, ಅಪರಾಧ ಕ್ರಮಾಂಕ 105/21 ಹಾಗೂ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 101/2022 ರಂತೆ ಪ್ರಕರಣಗಳು ದಾಖಲಾಗಿರುತ್ತದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡಂತ್ಯಾಯ ಅವರು ವಾದಮಂಡಿಸಿದ್ದಾರೆ.











0 comments:
Post a Comment