ವೃತ್ತಿ ನಿಷ್ಠೆ ಹಾಗೂ ಪ್ರಾಮಾಣಿಕ ಸೇವೆಗೆ ಸಮಾಜದಲ್ಲಿ ಗೌರವ ಖಂಡಿತ : ಪ್ರಭಾಕರ ಪ್ರಭು - Karavali Times ವೃತ್ತಿ ನಿಷ್ಠೆ ಹಾಗೂ ಪ್ರಾಮಾಣಿಕ ಸೇವೆಗೆ ಸಮಾಜದಲ್ಲಿ ಗೌರವ ಖಂಡಿತ : ಪ್ರಭಾಕರ ಪ್ರಭು - Karavali Times

728x90

17 October 2026

ವೃತ್ತಿ ನಿಷ್ಠೆ ಹಾಗೂ ಪ್ರಾಮಾಣಿಕ ಸೇವೆಗೆ ಸಮಾಜದಲ್ಲಿ ಗೌರವ ಖಂಡಿತ : ಪ್ರಭಾಕರ ಪ್ರಭು

ಬಂಟ್ವಾಳ, ಅಕ್ಟೋಬರ್ 18, 2026 (ಕರಾವಳಿ ಟೈಮ್ಸ್) : ಸಾರ್ವಜನಿಕ ಕ್ಷೆತ್ರದಲ್ಲಿ ಸೇವೆ ಸಲ್ಲಿಸುವವರು ವೃತ್ತಿ ನಿಷ್ಠೆಯಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಪ್ರಾಮಾಣಿಕ ಸೇವೆ ಮುಂದಿನ ದಿನಗಳಲ್ಲಿ ಕುಟುಂಬಕ್ಕೆ ದಾರಿದೀಪ ಆಗುತ್ತದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯಪಟ್ಟರು. 

ಸಂಘದ ಸದಸ್ಯರಾದ ದರ್ಣಪ್ಪ ನಾಯ್ಕ ಮತ್ತು ಸುನೀತಾ ಅವರುಗಳು ಕುಕ್ಕಿಪಾಡಿ ಗ್ರಾಮ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿ ಭಡ್ತಿಗೊಂಡು ಕ್ರಮವಾಗಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹಾಗೂ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿರುವ ಹಿನ್ನಲೆಯಲ್ಲಿ ಅವರನ್ನು ಸಂಘದ ವತಿಯಿಂದ ಇಲ್ಲಿನ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಗೌರವಿಸಿ ಅವರು ಮಾತಾನಾಡಿದರು.

ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೆÇೀಡುಂಬ, ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು ಶುಭ ಹಾರೈಸಿದರು. ಈ ಸಂದರ್ಭ ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ವೀರಪ್ಪ ಪರವ, ಜಾರಪ್ಪ ನಾಯ್ಕ, ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಅರ್, ನವೀನ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಶ್ ಬಂಗೇರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ವೃತ್ತಿ ನಿಷ್ಠೆ ಹಾಗೂ ಪ್ರಾಮಾಣಿಕ ಸೇವೆಗೆ ಸಮಾಜದಲ್ಲಿ ಗೌರವ ಖಂಡಿತ : ಪ್ರಭಾಕರ ಪ್ರಭು Rating: 5 Reviewed By: karavali Times
Scroll to Top