ಬಂಟ್ವಾಳ, ಅಕ್ಟೋಬರ್ 22, 2026 (ಕರಾವಳಿ ಟೈಮ್ಸ್) : ವಿದ್ಯಾರ್ಥಿಗಳ ಸಾಧನೆಗೆ ಪೆÇ್ರೀತ್ಸಾಹ, ಪ್ರತಿಭಾವಂತರಿಗೆ ಗೌರವ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ವತಿಯಿಂದ ಪ್ರತಿಭಾಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಅಕ್ಟೋಬರ್ 25 ರಂದು ಅಪರಾಹ್ನ 2.30ಕ್ಕೆ ಪೆÇಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.
ರಾಜ್ಯ ಕುಂಬಾರರ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ ಶ್ರೀನಿವಾಸ ವೇಲು, ದಕ್ಷಿಣ ಕನ್ನಡ ಜಿಲ್ಲಾ ಮಾತೃಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು, ಮಂಗಳೂರು ವಿಶ್ವವಿದ್ಯಾನಿಲಯದ ಉಪನ್ಯಾಸಕಿ ಡಾ ಆಶಾಲತಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಇದೇ ವೇಳೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದಾಮೋದರ ಮಾಸ್ಟರ್ ಏರ್ಯ, ಕರ್ನಾಟಕ ಐಡಲ್ ಪ್ರಶಸ್ತಿ ಪುರಸ್ಕೃತ ಸದಾನಂದ ಬಿ ಬಂಗೇರ ಮೊಡಂಕಾಪು ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಪುರಸ್ಕೃತ ಬೇಬಿ ಪ್ರಾದ್ಯಾ ಅವರನ್ನು ಗೌರವಿಸಲಾಗುವುದು. ಕುಲಾಲ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಜೊತೆಗೆ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ನಿರಂತರ ವಿದ್ಯಾರ್ಥಿ ವೇತನ ವಿತರಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.











0 comments:
Post a Comment