ಸ್ವ ಉದ್ಯೋಗ ಪ್ರೇರಣಾ ಶಿಬಿರದಲ್ಲಿ ರುಡ್ ಸೆಟ್ ಸಂಸ್ಥೆಯ ಮಾಹಿತಿ - Karavali Times ಸ್ವ ಉದ್ಯೋಗ ಪ್ರೇರಣಾ ಶಿಬಿರದಲ್ಲಿ ರುಡ್ ಸೆಟ್ ಸಂಸ್ಥೆಯ ಮಾಹಿತಿ - Karavali Times

728x90

14 October 2026

ಸ್ವ ಉದ್ಯೋಗ ಪ್ರೇರಣಾ ಶಿಬಿರದಲ್ಲಿ ರುಡ್ ಸೆಟ್ ಸಂಸ್ಥೆಯ ಮಾಹಿತಿ

ಬಂಟ್ವಾಳ, ಅಕ್ಟೋಬರ್ 14, 2026 (ಕರಾವಳಿ ಟೈಮ್ಸ್) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,  ಬಿ ಸಿ ಟ್ರಸ್ಟ್ ವತಿಯಿಂದ ಪದ್ಮವಿಭೂಷಣ ರಾಜರ್ಷಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ವಿಟ್ಲ ತಾಲೂಕಿನ ಕಲ್ಲಡ್ಕ ಹಾಲಿನ ಸೊಸೈಟಿಯ ಸಭಾಂಗಣದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸ್ವ-ಉದ್ಯೋಗ ಪ್ರೇರಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ರುಡ್ ಸೆಟ್ ಸಂಸ್ಥೆಯ ಕಾರ್ಯಚಟುವಟಿಕೆಗಳು, ಸ್ವ-ಉದ್ಯೋಗದ ಮಹತ್ವ, ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಲಭ್ಯವಿರುವ ವಿವಿಧ ಅವಕಾಶಗಳು ಹಾಗೂ ಉದ್ಯಮ ಶೀಲತೆಯ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮ ಆಯೋಜಿಸಿದ ಜ್ಞಾನ ವಿಕಾಸದ ತಾಲೂಕು ಸಮನ್ವಯಾಧಿಕಾರಿ ಶ್ರೀಮತಿ ದೀಪಾ, ಮೇಲ್ವಿಚಾರಕ ಸುಖರಾಜ್, ವಲಯಾಧ್ಯಕ್ಷೆ ಶ್ರೀಮತಿ ತುಳಸಿ, ಒಕ್ಕೂಟದ ಅಧ್ಯಕ್ಷ ಚಿದಾನಂದ ಹಾಗೂ ಎಲ್ಲಾ ಸೇವಾ ಪ್ರತಿನಿಧಿಗಳಿಗೆ ಧನ್ಯವಾದಗಳನ್ನು ಸಲ್ಲಿಸಲಾಯಿತು.

  • Blogger Comments
  • Facebook Comments

0 comments:

Post a Comment

Item Reviewed: ಸ್ವ ಉದ್ಯೋಗ ಪ್ರೇರಣಾ ಶಿಬಿರದಲ್ಲಿ ರುಡ್ ಸೆಟ್ ಸಂಸ್ಥೆಯ ಮಾಹಿತಿ Rating: 5 Reviewed By: karavali Times
Scroll to Top