ಮಂಗಳೂರು, ಅಕ್ಟೋಬರ್ 25, 2026 (ಕರಾವಳಿ ಟೈಮ್ಸ್) : ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕಾರ್ಯ£ರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ವಿಜಯವಾಣಿ ವರದಿಗಾರ ಪಿ.ಬಿ. ಹರೀಶ್ ರೈ ಅವರ ಧರ್ಮಪತ್ನಿ ಶ್ರೀಮತಿ ಉಷಾ ಕುಮಾರಿ (56) ಅ 24 ರಂದು ಶನಿವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಂಗಳೂರು ಸೈಂಟ್ ಅಲೋಸಿಯಸ್ ಹೈಸ್ಕೂಲಿನಲ್ಲಿ 28 ವರ್ಷಗಳ ಕಾಲ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಆ ಮೊದಲು ಮಂಗಳೂರಿನ ಚಿನ್ಮಯ ಹೈಸ್ಕೂಲ್ ಮತ್ತು ಉಳ್ಳಾಲ ಭಾರತ್ ಹೈಸ್ಕೂಲಿನಲ್ಲಿಯೂ ಕಾರ್ಯನಿರ್ವಹಿಸಿದ್ದರು. ಇವರು ಕೆಲ ಸಮಯದಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಉಷಾ ಕುಮಾರಿ ಅವರ ನಿಧನಕ್ಕೆ ಸಚಿವ ಯು.ಟಿ ಖಾದರ್, ಕನ್ನಡಿಗ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಹಾರಾಷ್ಟ್ರ ಘಟಕದ ನಿಕಟಪೂರ್ವ ಅಧ್ಯಕ್ಷ ರೋನ್ಸ್ ಬಂಟ್ವಾಳ್, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಮಾಜಿ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೆಯುಡಬ್ಲ್ಯೂಜೆ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ ಶಿವ ಮೂಡಿಗೆರೆ ಸಹಿತ ಹಲವು ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ,











0 comments:
Post a Comment