ಉಪ್ಪಿನಂಗಡಿ, ಅಕ್ಟೋಬರ್ 19, 2026 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶೆಣೈ ರಸ್ತೆ ಬಾರ್ ಸಮೀಪದಲ್ಲಿ ಇಬ್ಬರು ವ್ಯಕ್ತಿಗಳು ತಲವಾರು ಹಿಡಿದು ಗಲಾಟೆ ನಡೆಸಿದ ಘಟನೆ ಅ 18 ರಂದು ರಾತ್ರಿ ನಡೆದಿದೆ.
ಮಂಜುನಾಥ್, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿರುತ್ತದೆ. ಸದ್ರಿ ಗಲಾಟೆಯ ವೇಳೆ ಮಂಜುನಾಥ್ ಎಂಬಾತನು ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ಭೀತಿಯನ್ನುಂಟು ಮಾಡಿರುತ್ತಾನೆ. ಈ ವೇಳೆ ಸ್ಥಳಕ್ಕೆ ಬಂದ ಉಪ್ಪಿನಂಗಡಿ ಠಾಣಾ ಪೆÇಲೀಸರು ಸದ್ರಿ ಮಂಜುನಾಥ್ ಹಾಗೂ ವಿಶ್ವನಾಥ ಎಂಬವರುಗಳನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.














0 comments:
Post a Comment