ಬಂಟ್ವಾಳ, ಅಕ್ಟೋಬರ್ 22, 2026 (ಕರಾವಳಿ ಟೈಮ್ಸ್) : ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಬಂಟ್ವಾಳ ನಗರ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಮಂಚಿ ಗ್ರಾಮದ ನಿವಾಸಿ ಇರ್ಶಾದ್ ಅಲಿಯಾಸ್ ಮಹಮ್ಮದ್ ಇರ್ಶಾದ್ ಎಂದು ಹೆಸರಿಸಲಾಗಿದೆ. ಈತ ಬಂಟ್ವಾಳ ನಗರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 139/2007 ಕಲಂ 366, 368, 420, 120, 149 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಅ 21 ರಂದು ಬಂಟ್ವಾಳ ನಗರ ಪೆÇಲೀಸ್ ಠಾಣಾ ಎಎಸ್ಸೈ ಸುಜು, ಜಗದೀಶ್ ಮತ್ತು ಮಂಜುನಾಥ್ ಅವರುಗಳು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈತನ ಪಾಸ್ ಪೆÇೀರ್ಟ್ ವಶಕ್ಕೆ ಪಡೆದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.











0 comments:
Post a Comment