ಬಂಟ್ವಾಳ, ಅಕ್ಟೋಬರ್ 10, 2026 (ಕರಾವಳಿ ಟೈಮ್ಸ್) : ಕಳೆದ 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57) ಎಂದು ಹೆಸರಿಸಲಾಗಿದೆ. ಬಂಟ್ವಾಳ ನಗರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 163/2009 ಕಲಂ 11, 13, 32, 33, 34, 38(ಎ), 43 ಕೆ ಇ ಆಕ್ಟ್ ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗೆ ವಾರಂಟ್ ಜಾರಿಯಾಗಿತ್ತು. ಆರೋಪಿಯನ್ನು ಅ 9 ರಂದು ಮೂಡಬಿದ್ರೆ ಶಿರ್ತಾಡಿ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ಪೊಲೀಸ್ ಸಿಬ್ಬಂದಿಗಳಾದ ಬಶೀರ್, ಜಗದೀಶ್, ಸಂತೋಷ್, ಗವಿ ಸಿದ್ದಪ್ಪ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.












0 comments:
Post a Comment