ಕಳ್ಳತನ ಪ್ರಕರಣದಲ್ಲಿ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರ ಬಲೆಗೆ - Karavali Times ಕಳ್ಳತನ ಪ್ರಕರಣದಲ್ಲಿ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರ ಬಲೆಗೆ - Karavali Times

728x90

15 October 2026

ಕಳ್ಳತನ ಪ್ರಕರಣದಲ್ಲಿ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರ ಬಲೆಗೆ

ಬಂಟ್ವಾಳ, ಅಕ್ಟೋಬರ್ 15, 2026 (ಕರಾವಳಿ ಟೈಮ್ಸ್) : ಕಳ್ಳತನ ಪ್ರಕರಣದಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. 

ಬಂಧಿತ ಆರೋಪಿಯನ್ನು ಕೇರಳ-ಮಲಪ್ಪುರಂ ನಿವಾಸಿ ರಂಶೀದ್ ಎಂದು ಹೆರಿಸಲಾಗಿದೆ. ವಿಟ್ಲ ಪೆÇಲೀಸ್  ಠಾಣಾ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ ಕಳೆದ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ವಿಟ್ಲ ಪೆÇಲೀಸ್ ಠಾಣಾ ಸಿಬ್ಬಂದಿಗಳಾದ ಜಯರಾಮ ಹಾಗೂ ಶಿವಾನಂದ ಅವರುಗಳು ಅ 13 ರಂದು ನೀಲಂಬೂರು ವಂಡೂರು ಎಂಬಲ್ಲಿಂದ ದಸ್ತಗಿರಿ ಮಾಡಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಳ್ಳತನ ಪ್ರಕರಣದಲ್ಲಿ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top