15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತ ವಿಟ್ಲ ಪೊಲೀಸರ ಬಲೆಗೆ - Karavali Times 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತ ವಿಟ್ಲ ಪೊಲೀಸರ ಬಲೆಗೆ - Karavali Times

728x90

5 October 2026

15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತ ವಿಟ್ಲ ಪೊಲೀಸರ ಬಲೆಗೆ

 ಬಂಟ್ವಾಳ, ಅಕ್ಟೋಬರ್ 06, 2026 (ಕರಾವಳಿ ಟೈಮ್ಸ್) : ಬ್ಯಾಂಕಿನಲ್ಲಿ‌ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ಉದ್ಯೋಗವನ್ನು ಕೊಡಿಸದೇ, ಹಣವನ್ನು ಹಿಂತಿರುಗಿಸದೇ ವಂಚಿಸಿದ ಘಟನೆಗೆ‌ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣಾ ಪ್ರಕರಣದ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52) ಎಂಬಾತನನ್ನು ಅ 5 ರಂದು ವಿಟ್ಲ ಠಾಣಾ ಸಿಬ್ಬಂದಿಗಳಾದ ಶಿವಾನಂದ ಮಡ್ಡಿ,  ಶಿದ್ದಪ್ಪ ಹಾಗೂ ಯಂಕಪ್ಪ ಅವರು  ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತ ವಿಟ್ಲ ಪೊಲೀಸರ ಬಲೆಗೆ Rating: 5 Reviewed By: lk
Scroll to Top