ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧೀಸಿದ ಪುತ್ತೂರು ಗ್ರಾಮಾಂತರ ಪೊಲೀಸರು : ಓರ್ವನ ಬಂಧನ - Karavali Times ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧೀಸಿದ ಪುತ್ತೂರು ಗ್ರಾಮಾಂತರ ಪೊಲೀಸರು : ಓರ್ವನ ಬಂಧನ - Karavali Times

728x90

5 October 2026

ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧೀಸಿದ ಪುತ್ತೂರು ಗ್ರಾಮಾಂತರ ಪೊಲೀಸರು : ಓರ್ವನ ಬಂಧನ

ಪುತ್ತೂರು, ಅಕ್ಟೋಬರ್ 05, 2026 (ಕರಾವಳಿ ಟೈಮ್ಸ್) : ಪಿಕಪ್ ವಾಹನದಲ್ಲಿ ಕೇರಳ ಕಡೆಗೆ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ 11 ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡು ಪರಾರಿಯಾದ ಓರ್ವ ಆರೋಪಿಯನ್ನು ದಸ್ತಗಿರಿ ಮಾಡಿದ ಘಟನೆ ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಎಂಬಲ್ಲಿ ಅ 5 ರಂದು ಬೆಳಗ್ಗಿನ ಜಾವ ನಡೆದಿದೆ. 

ಅ 5 ರಂದುಇ ಬೆಳಗಿನ ಜಾವ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಕೇರಳದ ಕಡೆಗೆ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಸೈ ಸುಷ್ಮಾ ಜಿ ಭಂಡಾರಿ ಅವರ ನೇತೃತ್ವದ ಪೊಲೀಸರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಎಂಬಲ್ಲಿ ಕೆಎ19 ಎಎಫ್8558 ನೋಂದಣಿ ಸಂಖ್ಯೆಯ ಪಿಕಪ್ ವಾಹನವನ್ನು ತಡೆದಾಗ ಕೃತ್ಯ ಬೆಳಕಿಗೆ ಬಂದಿದೆ. 

ಪೊಲೀಸರ ದಾಳಿ ವೇಳೆ ವಾಹನದ ಚಾಲಕ ಹಾಗೂ ವಾಹನದಲ್ಲಿದ್ದ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದು, ವಾಹನ ಪರಿಶೀಲಿಸಿದಾಗ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿರುವುದು ಕಂಡು ಬಂದಿದೆ. ಸದ್ರಿ ಜಾನುವಾರುಗಳನ್ನು ಯಾವುದೇ ಪರವಾನಿಗೆ ಹೊಂದದೇ, ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಾಟ ಮಾಡುತ್ತಿರುವುದು ದೃಢಪಟ್ಟಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೇ ಮಾರಾಟ ಮಾಡಿದ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧೀಸಿದ ಪುತ್ತೂರು ಗ್ರಾಮಾಂತರ ಪೊಲೀಸರು : ಓರ್ವನ ಬಂಧನ Rating: 5 Reviewed By: karavali Times
Scroll to Top