ಅಕ್ರಮ ಕಪ್ಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಬಂಟ್ವಾಳ ನಗರ ಠಾಣಾ ಪೊಲೀಸರ ವಶಕ್ಕೆ - Karavali Times ಅಕ್ರಮ ಕಪ್ಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಬಂಟ್ವಾಳ ನಗರ ಠಾಣಾ ಪೊಲೀಸರ ವಶಕ್ಕೆ - Karavali Times

728x90

1 October 2026

ಅಕ್ರಮ ಕಪ್ಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಬಂಟ್ವಾಳ ನಗರ ಠಾಣಾ ಪೊಲೀಸರ ವಶಕ್ಕೆ

ಬಂಟ್ವಾಳ, ಅಕ್ಟೋಬರ್ 01, 2026 (ಕರಾವಳಿ ಟೈಮ್ಸ್) : ದಾಸಕೋಡಿ ಸಮೀಪದ ಚೆಂಡೆ ಎಂಬಲ್ಲಿ ಅಕ್ರಮ ಸಾಗಾಟ ಮಾಡುತ್ತಿದ್ದ ಕಪ್ಪು ಕಲ್ಲು ಸಹಿತ ಟಿಪ್ಪರ್ ಲಾರಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡ ಘಟನೆ ಸೆ 30 ರಂದು ನಡೆದಿದೆ. 

ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ದುರ್ಗಪ್ಪ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದು, ಟಿಪ್ಪರ್ ಚಾಲಕ ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮದ ನಿವಾಸಿ ಸೆಬಾಸ್ಟಿಯನ್ ಜೇಕಬ್ ಅವರು ಕೇರಳ ನೋಂದಣಿಯ ಟಿಪ್ಪರ್ ಲಾರಿಯಲ್ಲಿ 10 ಟನ್ ಅನ್ ಸೈಝ್ ಕಪ್ಪು ಕಲ್ಲುಗಳನ್ನು ಬಾಳ್ತಿಲ ಗ್ರಾಮದ ಕೋರ್ಯದ ಯಾದವ್ ಅವರು ತಿಳಿಸಿದಂತೆ ಯಾವುದೇ ಪರವಾನಿಗೆ ಇಲ್ಲದೆ ಕಾಸರಗೋಡಿಗೆ ಸಾಗಿಸುತ್ತಿದ್ದರು ಎಂಬುದು ಪೊಲೀಸ್ ತನಿಖೆ ವೇಳೆ ತಿಳಿದು ಬಂದಿದೆ. 

8 ಲಕ್ಷ ಮೌಲ್ಯದ ಟಿಪ್ಪರ್ ಲಾರಿ ಸಹಿತ ಸುಮಾರು 6 ಸಾವಿರ ರೂಪಾಯಿ ಮೌಲ್ಯದ ಕಪ್ಪು ಕಲ್ಲುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಕಪ್ಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಬಂಟ್ವಾಳ ನಗರ ಠಾಣಾ ಪೊಲೀಸರ ವಶಕ್ಕೆ Rating: 5 Reviewed By: karavali Times
Scroll to Top