ಮಂಗಳೂರು, ನವಂಬರ್ 10, 2026 (ಕರಾವಳಿ ಟೈಮ್ಸ್) : ವೆಲೆನ್ಸಿಯಾ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ ಧರ್ಮ ಗುರು ಫಾದರ್ ಸಿಪ್ರಿಯನ್ ಪಿಂಟೋ (65) ವಿರುದ್ದ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.
ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಸ್ಟಿಯನ್ ಚರ್ಚಿಗೆ ಪ್ರತಿ ಆದಿತ್ಯವಾರ ಪ್ರಾರ್ಥನೆಗೆ ತೆರಳುತ್ತಿದ್ದ ಅಪ್ರಾಪ್ತ 13 ವರ್ಷದ ಬಾಲಕನ ಮೇಲೆ ಫಾ ಸಿಪ್ರಿಯನ್ ಪಿಂಟೋ ಅವರು 2026 ರ ಮೇ 13 ರಂದು ಲೈಂಗಿಕ ಹಲ್ಲೆ ನಡೆಸಿರುವ ಬಗ್ಗೆ ನೀಡಿರುವ ದೂರಿನ ಆಧಾರದ ಮೇರೆಗೆ ಮಂಗಳೂರು ಮಹಿಳಾ ಪೆÇಲೀಸ್ ಠಾಣೆಯಲ್ಲಿ ಫೆÇೀಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಹಿಂದೆ ಅಕ್ಟೋಬರ್ 15 ರಂದು ಅಪ್ರಾಪ್ತ 14 ವರ್ಷದ ಹುಡುಗನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯಲ್ಲಿ ಫೆÇೀಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಾಗಿ ಪ್ರಸ್ತುತ ತನಿಖೆಯಲ್ಲಿರುತ್ತದೆ. ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡಿ ಅ 18 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುತ್ತಾರೆ.
ಮಹಿಳಾ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಮುಂದಿನ ತನಿಖೆಯ ಬಗ್ಗೆ ಮಂಗಳೂರು ಕೇಂದ್ರ ಉಪವಿಭಾಗ ಎಸಿಪಿ ಅವರಿಗೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ.


















0 comments:
Post a Comment