ಬಂಟ್ವಾಳ, ನವಂಬರ್ 02, 2026 (ಕರಾವಳಿ ಟೈಮ್ಸ್) : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಪುರಸಭೆ ಮಹಾಶಕ್ತಿ ಕೇಂದ್ರದ ವತಿಯಿಂದ ಜನಾಂದೋಲನ ಹಾಗೂ ಪಾದಯಾತ್ರೆ ನ 2 ರಂದು ನಡೆಯಿತು.
ಶಾಸಕ ಯು ರಾಜೇಶ್ ನಾಯ್ಕ್ ಅವರು ಪಾದಯಾತ್ರೆಯಲ್ಲಿ ಭಾಗವಹಿಸಿದರು. “ನಮ್ಮ ಹಕ್ಕಿಗಾಗಿ ನಮ್ಮ ಹೋರಾಟ” ಎಂಬ ಘೋಷವಾಕ್ಯದೊಂದಿಗೆ ನಡೆದ ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
ಈ ವೇಳೆ ಮಾತನಾಡಿದ ಶಾಸಕ ರಾಜೇಶ್ ನಾಯಕ್, ರಾಜ್ಯ ಸರ್ಕಾರದ ನೀತಿಗಳಿಂದ ಜನ ಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಧ್ವನಿ ಎತ್ತುವುದು ಮತ್ತು ಜನರ ಹಕ್ಕುಗಳ ಪರವಾಗಿ ಹೋರಾಟ ನಡೆಸುವುದು ಪಕ್ಷದ ಜವಾಬ್ದಾರಿಯಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಇಂತಹ ಜನಾಂದೋಲನಗಳು ಮಹತ್ವದ್ದಾಗಿವೆ ಎಂದರು.















0 comments:
Post a Comment