ಬೈರಿಕಟ್ಟೆ : ರಸ್ತೆಯಲ್ಲೇ ಕೆಟ್ಟು ನಿಂತ ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟದ ಲಾರಿ, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಬೈರಿಕಟ್ಟೆ : ರಸ್ತೆಯಲ್ಲೇ ಕೆಟ್ಟು ನಿಂತ ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟದ ಲಾರಿ, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

8 November 2026

ಬೈರಿಕಟ್ಟೆ : ರಸ್ತೆಯಲ್ಲೇ ಕೆಟ್ಟು ನಿಂತ ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟದ ಲಾರಿ, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ನವಂಬರ್ 09, 2026 (ಕರಾವಳಿ ಟೈಮ್ಸ್) : ತಾಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಘನ ಲಾರಿಯೊಂದು ದುರಸ್ತಿಗೀಡಾಗಿ ನಿಂತಿದ್ದು, ಪೊಲೀಸರ ಪರಿಶೀಲನೆ ವೇಳೆ ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ ಪ್ರಕರಣ ಪತ್ತೆಯಾಗಿದೆ. 

ಬೈರಿಕಟ್ಟೆಯ ರಸ್ತೆಯ ಮಧ್ಯದಲ್ಲೇ ಲಾರಿ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಈ ಅಕ್ರಮ ಲ್ಯಾಟರೈಟ್ ಮಣ್ಣು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. 

ಲಾರಿ ಚಾಲಕ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಇರ್ಫಾನ್ ಪಾಷಾ (40) ಎಂಬಾತನಲ್ಲಿ ಪೊಲೀಸರು ವಿಚಾರಿಸಿದಾಗ ಯಾವುದೇ ಪರವಾನಿಗೆ ಹಾಗೂ ದಾಖಲಾತಿ ಹೊಂದದೇ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ತುಂಬಿಸಿಕೊಂಡು ಸಾಗಿಸುತ್ತಿರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆ ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಬೈರಿಕಟ್ಟೆ : ರಸ್ತೆಯಲ್ಲೇ ಕೆಟ್ಟು ನಿಂತ ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟದ ಲಾರಿ, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top