ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 100 LSD ಡ್ರಗ್ಸ್ ಸ್ಟ್ರಿಪ್ ಗಳ ಸಹಿತ ಇಬ್ಬರು ಕುಖ್ಯಾತರ ಬಂಧನ - Karavali Times ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 100 LSD ಡ್ರಗ್ಸ್ ಸ್ಟ್ರಿಪ್ ಗಳ ಸಹಿತ ಇಬ್ಬರು ಕುಖ್ಯಾತರ ಬಂಧನ - Karavali Times

728x90

4 November 2026

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 100 LSD ಡ್ರಗ್ಸ್ ಸ್ಟ್ರಿಪ್ ಗಳ ಸಹಿತ ಇಬ್ಬರು ಕುಖ್ಯಾತರ ಬಂಧನ


ಮಂಗಳೂರು, ನವೆಂಬರ್ 05, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು LSD (Lysergic Acid Diethylamide) ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿತರಿಬ್ಬರನ್ನು ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಬಂಧಿಸಿ, ಅವರಿಂದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ 100 ಡ್ರಗ್ಸ್ ಸ್ಟ್ರಿಪ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರು ಅಳಪೆ, ಮಂಗಳೂರು ಸಾ ಮಿಲ್ ಹತ್ತಿರದ ತುಂಬೆ ಪ್ಲಾಝಾ ಸಂಕೀರ್ಣದ ಫ್ಲ್ಯಾಟ್ ಸಂಖ್ಯೆ 802 ರ ನಿವಾಸಿ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30) ಹಾಗೂ ಮಂಗಳೂರು ಉರ್ವಸ್ಟೋರ್ ದಡ್ಡಲ್ ಕಾಡ್ ಎಮಿಲೆ ಮ್ಯಾನ್ಶನ್ ಅಪಾರ್ಟ್ಮೆಂಟ್ ನಿವಾಸಿ ಸಿದ್ದಾರ್ಥ ಶೆಟ್ಟಿ ಪ್ರಾಯ (35) ಎಂದು ಹೆಸರಿಸಲಾಗಿದೆ.

ಆರೋಪಿಗಳು ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಡ್ರಗ್ಸ್ ಸ್ಟ್ರಿಪ್ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ನ 3 ರಂದು ಮದ್ಯಾಹ್ನ ಮಂಗಳೂರು ನಗರದ ಪಡೀಲ್ ರೈಲ್ವೆ ಬ್ರಿಡ್ಜ್  ಬಳಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ಬಂಧಿತ ಆರೋಪಿಗಳಿಂದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ 100 ಡ್ರಗ್ಸ್ ಸ್ಟ್ರಿಪ್ ಹಾಗೂ 3 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3.35 ಲಕ್ಷ ರೂಪಾಯಿಗಳಾಗಿವೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆರೋಪಿಗಳ  ಪೈಕಿ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ ಎಂಬಾತನ ವಿರುದ್ಧ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿರುತ್ತದೆ ಹಾಗೂ ಆರೋಪಿ ಸಿದ್ದಾರ್ಥ ಶೆಟ್ಟಿ ಎಂಬಾತನ ವಿರುದ್ಧ ಮಂಗಳೂರು ನಗರದ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ, ಗಾಂಜಾ ಮಾರಾಟ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತವೆ.

ಈ ಮಾದಕವಸ್ತು ಮಾರಾಟ/ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಮಾರಾಟ/ ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 100 LSD ಡ್ರಗ್ಸ್ ಸ್ಟ್ರಿಪ್ ಗಳ ಸಹಿತ ಇಬ್ಬರು ಕುಖ್ಯಾತರ ಬಂಧನ Rating: 5 Reviewed By: lk
Scroll to Top