ಬಂಟ್ವಾಳ, ನವಂಬರ್ 11, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡಿನ ಫ್ಲೈ ಓವರ್ ಮೇಲ್ಭಾಗದಲ್ಲಿ ಬೈಕೊಂದಕ್ಕೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ 40 ಅಡಿ ಎತ್ತರದ ಫ್ಲೈ ಓವರ್ ಮೇಲ್ಭಾಗದಿಂದ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ನ 10 ರಂದು ಮಧ್ಯಾಹ್ನ ವೇ:ಎ ಸಂಭವಿಸಿದೆ.
ಫ್ಲೈ ಓವರ್ ಮೇಲಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಅವ್ ನೀಲ್ ಸಾವಿಯೋ ಡಿಸೋಜ ಎಂದು ಹೆಸರಿಸಲಾಗಿದೆ. ಇವರು ಬೈಕಿನಲ್ಲಿ ಬಿ ಸಿ ರೋಡಿನ ಫ್ಲೈ ಓವರ್ ಮೇಲ್ಭಾಗದಲ್ಲಿ ಸಂಚರಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ದಿಯಾ ಕೊಠಾರಿ ಎಂಬಾಕೆ ಚಲಾಯಿಸುತ್ತಿದ್ದ ಬೈಕ್ ಹಿಂದಿನಿಂದ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಅವ್ ನೀಲ್ ಸಾವಿಯೋ ಡಿ ಸೋಜ ಅವರು 40 ಅಡಿ ಎತ್ತರದ ಫ್ಲೈ ಓವರ್ ಮೇಲಿಂದ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ. ಘಟನೆಯಿಂದ ಡಿಸೋಜ ಅವರ ಎದೆಗೆ, ಎದ ಭುಜಕ್ಕೆ, ಹೊಟ್ಟೆಗೆ, ಬೆನ್ನಿಗೆ ಹಾಗೂ ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದು, ಹೆಲ್ಮೆಟ್ ಧರಿಸಿದ್ದ ಪರಿಣಾಮ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರನ್ನು ಸ್ಥಳೀಯರು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತಪಡಿಸಿದ ಬೈಕ್ ಸವಾರಿಣಿ ದಿಯಾ ಕೊಠಾರಿ ಅವರಿಗೆ ಯಾವುದೇ ಗಾಯಗಳಾಗಿರುವುದಿಲ್ಲ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment