ಮಂಗಳೂರು, ನವಂಬರ್ 24, 2026 (ಕರಾವಳಿ ಟೈಮ್ಸ್) : ರಾಜ್ಯ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ಅವರು ನವೆಂಬರ್ 25ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಬುಧವಾರ ಬೆಳಗ್ಗೆ 11.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 11.30ಕ್ಕೆ ಡಿಲೊಟ್ ಕಂಪೆನಿಯ ನೂತನ ಕಚೇರಿ ಉದ್ಘಾಟನೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕರಾವಳಿ ಕಾವಲು ಪೆÇಲೀಸ್ ಮತ್ತು ವಿಶೇಷ ಸಶಸ್ತ್ರ ಪೆÇಲೀಸ್ ಪಡೆಗಳ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಅಪರಾಹ್ನ 3 ಗಂಟೆಗೆ ತಣ್ಣೀರುಬಾವಿಯಲ್ಲಿ ಡಾಟಾ ಸೆಂಟರ್ ಸ್ಥಾಪನೆಯ ಸಂಬಂಧ ಸ್ಥಳ ಪರಿಶೀಲನೆ ನಡೆಸುವ ಸಚಿವರು ಸಂಜೆ 6.10ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.












0 comments:
Post a Comment