ಮಂಗಳೂರು, ನವೆಂಬರ್ 06, 2026 (ಕರಾವಳಿ ಟೈಮ್ಸ್) : ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾ ಮಾರಾಟ ಮಾಡಲು ಬಂದಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ಉತ್ತರ ಉಪ ವಿಭಾಗದ ಎ.ಸಿ.ಪಿ. ಅವರ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಅರೋಪಿಯನ್ನು ಪುತ್ತೂರು ತಾಲೂಕಿನ ಪಡ್ನೂರು ಅಂಚೆ ವ್ಯಾಪ್ತಿಯ ಪಡ್ಡಾಯೂರು ನಿವಾಸಿ ಹಂಜಾ ಎಂಬವರ ಪುತ್ರ ಮೊಹಮ್ಮದ್ ನಿಸಾರ್ (23) ಎಂದು ಹೆಸರಿಸಲಾಗಿದೆ.
ಬಂಧಿತ ಆರೋಪಿಯ ವಶದಲ್ಲಿದ್ದ ಸುಮಾರು 1.90 ಲಕ್ಷ ರೂಪಾಯಿ ಮೌಲ್ಯದ 3 ಕೆ.ಜಿ 800 ಗ್ರಾಂ ಗಾಂಜಾ ಮತ್ತು 4 ಸಾವಿರ ರೂಪಾಯಿ ಮೌಲ್ಯದ ಮೊಬೈಲ್ ಪೋನ್ ಹಾಗೂ ಗಾಂಜಾ ಸಾಗಿಸಲು ಬಳಸಿದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಗಾಂಜಾವನ್ನು ಸುರತ್ಕಲ್, ಪಣಂಬೂರು, ಕಾವೂರು ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿದು ಬಂದಿದ್ದು, ಈ ಹಿಂದೆ ಕೂಡಾ ಹಲವು ಭಾರಿ ಗಾಂಜಾವನ್ನು ಮಂಗಳೂರು ನಗರದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ.
ಸದ್ರಿ ಆರೋಪಿತನಿಂದ ಸ್ವಾಧೀನಪಡಿಸಿಕೊಳ್ಳಲಾದ ಗಾಂಜಾ, ಮೊಬೈಲ್ ಮತ್ತು ಕಾರ್ ನ ಒಟ್ಟು ಮೌಲ್ಯ 3.94 ಲಕ್ಷ ರೂಪಾಯಿಗಳಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















0 comments:
Post a Comment