ಮಂಗಳೂರು : ಕರಾವಳಿ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ - Karavali Times ಮಂಗಳೂರು : ಕರಾವಳಿ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ - Karavali Times

728x90

9 November 2026

ಮಂಗಳೂರು : ಕರಾವಳಿ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ

ಮಂಗಳೂರು, ನವಂಬರ್ 10, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವವನ್ನು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗುತ್ತಿದ್ದು, ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ ಕಲಾ ಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು ಈ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆÀ ಅರ್ಜಿಯನ್ನು ನವೆಂಬರ್ 18ರೊಳಗೆ ನಗರದ ಉರ್ವಸ್ಟೋರ್ ತುಳು ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಸಾಂಸ್ಕøತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ ಕಲೆ ಮತ್ತು ಸಂಸ್ಕøತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಕÀರಾವಳಿ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕøತಿಕ ಸಮಿತಿಯಿಂದ ಆಯ್ಕೆಯಾದ ಕಲಾ ತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು : ಕರಾವಳಿ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ Rating: 5 Reviewed By: karavali Times
Scroll to Top