ಬಂಟ್ವಾಳ, ನವಂಬರ್ 20, 2026 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಎಂಬಲ್ಲಿ ನ 19 ರಂದು ಸಂಜೆ ಲಾರಿ ಡಿಕ್ಕಿ ಹೊಡೆದು 14ರ ಹರೆಯದ ಶಾಲಾ ಬಾಲಕಿಯೋರ್ವಳು ದಾರುಣವಾಗಿ ಮೃತಪಟ್ಟಿದ್ದಾಳೆ.
ಮೃತ ಬಾಲಕಿಯನ್ನು ನೇರಳಕಟ್ಟೆ ನಿವಾಸಿ, ಇಲ್ಲಿನ ಜನಪ್ರಿಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಹೆಸರಿಸಲಾಗಿದೆ. ಬಾಲಕಿ ರಸ್ತೆ ದಾಟುತ್ತಿದ್ದ ವೇಳೆ ಮಾಣಿ ಕಡೆಯಿಂದ ಜಿಜೆ27 ಟಿಡಿ3022 ನೋಂದಣಿ ಸಂಖ್ಯೆಯ ಲಾರಿಯನ್ನು ಅದರ ಚಾಲಕ ಗುಜರಾತ್ ಅರುವಳ್ಳಿ ನಿವಾಸಿ ಕೊಕಾಡಿ ಮೊಹಮ್ಮದ್ ಜನಾಫ್ ರೆಹಮಾನ್ ಬಾಯ್ (30) ಎಂಬಾತ ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಬಾಲಕಿಗೆ ಅಪಘಾತಪಡಿಸಿರುವುದಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.












0 comments:
Post a Comment