ಮಂಗಳೂರು, ನವಂಬರ್ 07, 2026 (ಕರಾವಳಿ ಟೈಮ್ಸ್) : ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ನಿರ್ಮಿಸಲು ಉದ್ದೇಶಿರುವ 300 ಹಾಸಿಗೆಗಳ ಭೋಧನಾ ಆಸ್ಪತ್ರೆ ಕಟ್ಟಡ ನಿರ್ಮಾಣದ 5 ಎಕ್ರೆ ಸ್ಥಳದಲ್ಲಿಗುರುತ್ತಿಸಿರುವ ವಿವಿಧ ಜಾತಿಯ 82 ಮರಗಳನ್ನು ಕಡಿಯಲು ಉದ್ದೇಶಿಸಿಸಲಾಗಿದೆ.
ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯಡಿ 50ಕ್ಕಿಂತ ಹೆಚ್ಚು ಮರಗಳನ್ನು ಕಡಿಯಬೇಕಾದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ನವೆಂಬರ್ 18 ರಂದು ಬೆಳಿಗ್ಗೆ 11 ಗಂಟೆಗೆ ಪುತ್ತೂರು ವಲಯ ಅರಣ್ಯಾಧಿಕಾರಿಯವರ ಕಚೇರಿ ಆವರಣ (ದೂ.ಸಂ 08251-298404) ದಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಕರೆಯಲಾಗಿದೆ.
ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದು ಅಥವಾ ಸದ್ರಿ ದಿನಾಂಕದ ಒಳಗಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಪುತ್ತೂರು ಉಪವಿಭಾಗ, ಪುತ್ತೂರು ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ acfputtur@yahoo.in / ಅಂಚೆ ವಿಳಾಸ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪುತ್ತೂರು ಉಪವಿಭಾಗ, ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ನೆಲ್ಲಿಕಟ್ಟೆ, ಪುತ್ತೂರು ತಾಲೂಕು, ದ.ಕ. 574201 ಮೂಲಕ ಆಕ್ಷೇಪಣೆಯನ್ನು ಸಲ್ಲಿಸಬಹುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















0 comments:
Post a Comment