ಉಜಿರೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಅಹ್ವಾನ - Karavali Times ಉಜಿರೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಅಹ್ವಾನ - Karavali Times

728x90

16 November 2026

ಉಜಿರೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಅಹ್ವಾನ

ಉಜಿರೆ, ನವಂಬರ್ 16, 2026 (ಕರಾವಳಿ ಟೈಮ್ಸ್) : ನಿರುದ್ಯೋಗಿ ಯುವಕ-ಯುವತಿಯರು ಸ್ವಂತ ಉದ್ಯಮ ಆರಂಭಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉತ್ತೇಜನ ನೀಡುವ ಉದ್ದೇಶದಿಂದ ಉಜಿರೆಯ ಸಿದ್ಧವನದಲ್ಲಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ, ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಹಾಗೂ ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮೂರು ಉದ್ಯಮ ತರಬೇತಿಗಳು :

1. ಕೃಷಿ ಉದ್ಯಮ : ನವೆಂಬರ್ 23ರಿಂದ ಡಿಸೆಂಬರ್ 5ರವರೆಗೆ (13 ದಿನಗಳು).

2. ಪುರುಷರ ಪಾರ್ಲರ್ ಮತ್ತು ಸೆಲೂನ್ ಉದ್ಯಮ : ನವೆಂಬರ್ 25ರಿಂದ ಡಿಸೆಂಬರ್ 24ರವರೆಗೆ (30 ದಿನಗಳು).

3. ಫಾಸ್ಟ್‍ಫುಡ್ ಸ್ಟಾಲ್ ಉದ್ಯಮ : ನವೆಂಬರ್ 27ರಿಂದ ಡಿಸೆಂಬರ್ 8ರವರೆಗೆ (12 ದಿನಗಳು).

ತರಬೇತಿಯ ವಿಶೇಷತೆ :

18 ರಿಂದ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಅವಕಾಶ.

ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಸಂಪೂರ್ಣ ಉಚಿತ ತರಬೇತಿ.

ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ.

ತರಬೇತಿ ಪೂರ್ಣಗೊಳಿಸಿದವರಿಗೆ ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಮಾನ್ಯತೆ ಪಡೆದ ಪ್ರಮಾಣಪತ್ರ.

ಅರ್ಜಿ ಸಲ್ಲಿಸುವ ಬಗ್ಗೆ :  ಸ್ವಂತ ಉದ್ಯಮ ಆರಂಭಿಸುವ ಕನಸು ಹೊಂದಿರುವ ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ಹೆಸರು, ಪೂರ್ಣ ವಿಳಾಸ, ವಯಸ್ಸು, ವಿದ್ಯಾರ್ಹತೆ ಹಾಗೂ ಆಯ್ಕೆ ಮಾಡಿಕೊಂಡ ತರಬೇತಿಯ ಹೆಸರನ್ನು ನಮೂದಿಸಿ ಕೆಳಗಿನ ಮೊಬೈಲ್ ಸಂಖ್ಯೆಗಳ ವಾಟ್ಸಪ್ ಗೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ವಿವರಗಳಿಗೆ 8904064507, 9980885900, 9380626695 ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ರುಡ್ ಸೆಟ್ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಉಜಿರೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಅಹ್ವಾನ Rating: 5 Reviewed By: karavali Times
Scroll to Top