ಹೆದ್ದಾರಿ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮಕೈಗೊಳ್ಳಿ ಹಾಗೂ ಸಂಚಾರ ನಿಯಮ ಉಲ್ಲಂಘನೆ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸಿ : ಅಧಿಕಾರಿಗಳಿಗೆ ಜಿಲ್ಲಾ ಎಸ್ಪಿ ಸೂಚನೆ - Karavali Times ಹೆದ್ದಾರಿ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮಕೈಗೊಳ್ಳಿ ಹಾಗೂ ಸಂಚಾರ ನಿಯಮ ಉಲ್ಲಂಘನೆ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸಿ : ಅಧಿಕಾರಿಗಳಿಗೆ ಜಿಲ್ಲಾ ಎಸ್ಪಿ ಸೂಚನೆ - Karavali Times

728x90

18 November 2026

ಹೆದ್ದಾರಿ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮಕೈಗೊಳ್ಳಿ ಹಾಗೂ ಸಂಚಾರ ನಿಯಮ ಉಲ್ಲಂಘನೆ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸಿ : ಅಧಿಕಾರಿಗಳಿಗೆ ಜಿಲ್ಲಾ ಎಸ್ಪಿ ಸೂಚನೆ

ಮಂಗಳೂರು, ನವಂಬರ್ 18, 2026 (ಕರಾವಳಿ ಟೈಮ್ಸ್) : ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ ಸಂಚಾರ ವ್ಯವಸ್ಥೆ ನಿರ್ವಹಣೆಗೆ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನ 18 ರಂದು ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಸೇರಿದಂತೆ ಹಲವೆಡೆ ಪದೇ ಪದೇ ಅಪಘಾತವಾಗಿ ಹಾಗೂ ಜೀವಹಾನಿ ಆಗುವ ಘಟನೆಗಳು ನಡೆಯುತ್ತಿದ್ದು, ಇಂತಹ ಸ್ಥಳಗಳಲ್ಲಿ ವೇಗ ನಿಯಂತ್ರಣ, ಟ್ರಾಫಿಕ್ ಸಿಗ್ನಲ್, ಸೂಚನಾ ಫಲಕ ಸೇರಿದಂತೆ ವಿವಿಧ ಸಂಚಾರಿ ಸುರಕ್ಷತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಈ ಸ್ಥಳಗಳಲ್ಲಿ ತಾತ್ಕಾಲಿಕ ಕ್ರಮ ಕೈಗೊಳ್ಳುವುದಲ್ಲದೆ ಭವಿಷ್ಯದ ದೃಷ್ಟಿಯಿಂದ ಶಾಶ್ವತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಲವೆಡೆ ರಾತ್ರಿ ವೇಳೆ  ಬೀದಿ ದೀಪವಿಲ್ಲದೆ ವಾಹನ ಅಪಘಾತಕ್ಕೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಹೆದ್ದಾರಿಗಳಲ್ಲಿ ವಿದ್ಯುತ್ ದೀಪ ಅಳವಡಿಸುವಂತೆ ಅವರ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಪ್ರಸ್ತುತ 42 ಪ್ರಮುಖ ಅಪಘಾತ ಸ್ಥಳ ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.  

ವಾಹನಗಳಿಗೆ ಟಿಂಟೆಡ್ ಗ್ಲಾಸ್ : 33703 ಕೇಸು ದಾಖಲು

2025-26ರಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಿಧ ಪ್ರಕರಣ  ದಾಖಲಿಸಲಾಗಿದೆ. ಈ ಪೈಕಿ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ ಬಗ್ಗೆ 2,604 ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಟಿಂಟೆಡ್ ಗ್ಲಾಸ್ ಅಳವಡಿಸಿದ 33,703 ವಾಹನಗಳ ಮೇಲೆ ಪ್ರಕರಣ ದಾಖಲಿಸಿ, 2025ರಲ್ಲಿ 73.89  ಲಕ್ಷ ಹಾಗೂ 2026ರಲ್ಲಿ 75.88 ಲಕ್ಷ ರೂಪಾಯಿ ದಂಡ ವಸೂಲು ಮಾಡಲಾಗಿದೆ. ಕರ್ಕಶ ಹಾರ್ನ್ ಅಳವಡಿಸಿದ ವಾಹನಗಳ ವಿರುದ್ಧ 2,805 ಪ್ರಕರಣ ದಾಖಲಿಸಿ 2026ರಲ್ಲಿ 8.38 ಲಕ್ಷ ಹಾಗೂ 2025ರಲ್ಲಿ 7.44 ಲಕ್ಷ ರೂಪಾಯಿ ದಂಡ ವಸೂಲು ಮಾಡಲಾಗಿದೆ.

ಶಾಲಾ ವಾಹನದಲ್ಲಿ ಮಿತಿಮೀರಿ ಮಕ್ಕಳನ್ನು ಸಾಗಿಸಿದ 974 ಪ್ರಕರಣ ದಾಖಲಿಸಲಾಗಿದೆ. ಮೀನು ಸಾಗಾಟ ವಾಹನಗಳಲ್ಲಿ ತ್ಯಾಜ್ಯ ನೀರನ್ನು ರಸ್ತೆಗೆ ಚೆಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 2026ರಲ್ಲಿ 535 ಪ್ರಕರಣ ದಾಖಲಿಸಿ, 2.65 ಲಕ್ಷ ರೂಪಾಯಿ ದಂಡ ವಸೂಲು ಮಾಡಲಾಗಿದೆ. ಪೆÇಲೀಸ್ ಇಲಾಖೆ ಹಾಗೂ ಆರ್.ಟಿ.ಒ ಇಲಾಖೆಗಳು ಈ ಪ್ರಕರಣಗಳನ್ನು ದಾಖಲಿಸಿರುತ್ತಾರೆ. ಸಂಚಾರ ನಿಯಮ ಉಲ್ಲಂಘನೆ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲು ಎಸ್ಪಿ ತಿಳಿಸಿದರು.

ರಸ್ತೆ ಅಪಘಾತ ನಡೆಸಿ ಜೀವಹಾನಿಗೆ ಕಾರಣವಾದ 279 ಪ್ರಕರಣಗಳಲ್ಲಿ 538 ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಡಿಸಿಪಿ ರವಿಶಂಕರ್, ಎ.ಸಿ.ಪಿ ನಜ್ಮಾ ಫಾರೂಕಿ, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ನಾಯಕ್, ಆರ್.ಟಿ.ಓ ಅಧಿಕಾರಿ ಮುರಗೇಂದ್ರ ಬಿ ಶಿರೋಳ್ಕರ್ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಹೆದ್ದಾರಿ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮಕೈಗೊಳ್ಳಿ ಹಾಗೂ ಸಂಚಾರ ನಿಯಮ ಉಲ್ಲಂಘನೆ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸಿ : ಅಧಿಕಾರಿಗಳಿಗೆ ಜಿಲ್ಲಾ ಎಸ್ಪಿ ಸೂಚನೆ Rating: 5 Reviewed By: karavali Times
Scroll to Top