ಮಂಗಳೂರು, ನವಂಬರ್ 20, 2026 (ಕರಾವಳಿ ಟೈಮ್ಸ್) : 2026ರ ಅಕ್ಟೋಬರ್ 29ರ ಸರ್ಕಾರದ ಆದೇಶದಂತೆ, ಸಾರಿಗೆ ಇಲಾಖೆಯಲ್ಲಿ 1991 ರಿಂದ 2025 ರವರೆಗಿನ ಅವಧಿಯಲ್ಲಿ ದಾಖಲಾಗಿರುವ ಹಾಗೂ ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಲಾಗಿದೆ.
ಈ ವಿಶೇಷ ರಿಯಾಯಿತಿಯನ್ನು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದೆ. ಅದರಂತೆ ನವೆಂಬರ್ 21 ರಿಂದ ಡಿಸೆಂಬರ್ 11ರವರೆಗೆ ಬಾಕಿ ಇರುವ ಅರ್ಹ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗುತ್ತದೆ. ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ದಂಡದ ಮೊತ್ತವನ್ನು ಪಾವತಿಸಲು ಕಾಯುತ್ತಿರುವ ವಾಹನ ಮಾಲೀಕರು ಹಾಗೂ ಚಾಲಕರಿಗೆ ಇದು ಉತ್ತಮ ಅವಕಾಶವಾಗಿದೆ.
ಆದ್ದರಿಂದ, ಸಾರ್ವಜನಿಕರು ಈ ವಿಶೇಷ ರಿಯಾಯಿತಿಯ ಸದುಪಯೋಗ ಪಡೆದುಕೊಂಡು, ತಮ್ಮ ವಾಹನಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಹ ಇ-ಚಲನ್ ಪ್ರಕರಣಗಳ ದಂಡವನ್ನು ಶೇ. 50ರಷ್ಟು ರಿಯಾಯಿತಿಯಲ್ಲಿ ಪಾವತಿಸುವ ಮೂಲಕ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












0 comments:
Post a Comment