ಮಂಗಳೂರು, ನವಂಬರ್ 18, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ನ 18 ರಂದು ಮಂಗಳ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಉಪನಿರ್ದೇಶಕ ಪ್ರದೀಪ್ ಡಿಸೋಜಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೇಜಸ್ ಶೆಟ್ಟಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಗಳು, ಕ್ರೀಡಾಪಟುಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳು ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳ ಅಭಿವೃದ್ಧಿ ಕುರಿತು ಸಮಗ್ರ ಸಮಾಲೋಚನೆ ನಡೆಸಲಾಯಿತು.
ಮಂಗಳ ಕ್ರೀಡಾಂಗಣವನ್ನು ಇನ್ನಷ್ಟು ಸುಸಜ್ಜಿತಗೊಳಿಸಿ, ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದ್ದಾಗಿದೆ.
















0 comments:
Post a Comment