ಮಂಗಳೂರು, ನವಂಬರ್ 13, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದ ಪಣಂಬೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿರುವ ಪೊಲೀಸರು ಗಡೀಪಾರು ಮಾಡುವ ಬಗ್ಗೆ ಕಾನೂನು ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಬಂಧಿತರ ಅಕ್ರಮ ಬಾಂಗ್ಲಾ ವಲಸಿಗರನ್ನು ಆಶಿಕುಲ್ ಇಸ್ಲಾಂ ಹಾಗೂ ಎಂ ಡಿ ಅಮೀನ್ ಎಂದು ಹೆಸರಿಸಲಾಗಿದೆ.
ಪಣಂಬೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು ಬೀಚ್ ಹತ್ತಿರದ ರೆಸ್ಟೋರೆಂಟ್ ಒಂದರಲ್ಲಿ ಅಕ್ರಮ ಬಾಂಗ್ಲಾದೇಶದ ಇಬ್ಬರು ವಲಸಿಗರು ಕೆಲಸ ಮಾಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಣಂಬೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅವರಲ್ಲಿ ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಪೊಲೀಸರ ವಿಚಾರಣೆ ವೇಳೆ ಕಂಡು ಬಂದಿದೆ. ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಅವರನ್ನು ಅಕ್ರಮವಾಗಿ ನೆಲೆಸಿದ ಕಾರಣ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ ನಂತರ ಎಫ್ ಆರ್ ಆರ್ ಒ ಅವರ ಮುಂದೆ ಹಾಜರುಪಡಿಸಿ, ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಬಗ್ಗೆ ಕಾನೂನು ಪ್ರಕ್ರಿಯೆಗೆ ಪಣಂಬೂರು ಠಾಣೆಯಲ್ಲಿ ಚಾಲನೆ ನೀಡಲಾಗಿದೆ.
ಈ ಪತ್ತೆ ಕಾರ್ಯದಲ್ಲಿ ಪಣಂಬೂರು ಠಾಣಾ ಪೆÇಲೀಸ್ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ಪಿಎಸ್ಸೈಗಳಾದ ಶ್ರೀಮತಿ ಶ್ರೀಕಲಾ ಕೆ ಟಿ, ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಂತಿಯಾಝ್, ಫಕ್ಕಿರೇಶ್, ರಾಕೇಶ್ ಎಲ್ ಎಂ ಅವರುಗಳು ಭಾಗವಹಿಸಿರುತ್ತಾರೆ.














0 comments:
Post a Comment